Featured

ಉಳ್ಳಾಲ:  ಸಮುದ್ರದ ಅಲೆಗಳನ್ನು ತೆಡೆಯಲು ‘ಸೀ ವೇವ್ ಬ್ರೇಕರ್ ಟೆಕ್ನಾಲಜಿ , ಕಡಲ್ಕೊರೆತಕ್ಕೆ 1 ಕಿ.ಮೀ. ವ್ಯಾಪ್ತಿಯಲ್ಲಿ ಶಾಶ್ವತ ಯೋಜನೆ : ಸಿಎಂ ಬೊಮ್ಮಾಯಿ – Vishwanews24

ಉಳ್ಳಾಲ:  ಸಮುದ್ರದ ಅಲೆಗಳನ್ನು ತೆಡೆಯಲು ‘ಸೀ ವೇವ್ ಬ್ರೇಕರ್ ಟೆಕ್ನಾಲಜಿ , ಕಡಲ್ಕೊರೆತಕ್ಕೆ 1 ಕಿ.ಮೀ. ವ್ಯಾಪ್ತಿಯಲ್ಲಿ ಶಾಶ್ವತ ಯೋಜನೆ : ಸಿಎಂ ಬೊಮ್ಮಾಯಿ

ಉಳ್ಳಾಲ: ಕಡಲ ಕೊರೆತ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಕೇಂದ್ರ ಸರ್ಕಾರದ ನೆರವಿನೊಂದಿಗೆ ದೀರ್ಘಕಾಲದ ಯೋಜನೆ ರೂಪಿಸಲಾಗುವುದು ಎಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಿರುವ ಅವರು ಮಂಗಳವಾರ ರಾತ್ರಿ ಉಳ್ಳಾಲದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ನಿರಂತರವಾಗಿ ಕಡಲ ಕೊರೆತ ಆಗುತ್ತಿದೆ. ಉಳ್ಳಾಲದಲ್ಲಿ ಕಳೆದ ಬಾರಿ ಸುಮಾರು 800 ಮೀ ಕಡಲ ಕೊರೆತ ಆಗಿತ್ತು. ಈ ಬಾರಿ 600 ಮೀ ಆಗಿದೆ. ಹೀಗಾಗಿ ಕಡಲ ಕೊರೆತ ಸಮಸ್ಯೆ ಶಾಶ್ವತ ಪರಿಹಾರ ನೀಡುವುದು ಅತ್ಯಂತ ಅವಶ್ಯಕವಾಗಿದೆ ಎಂದರು.

ಸಮುದ್ರದ ಅಲೆಗಳನ್ನು ತೆಡೆಯುವ ನಿಟ್ಟಿನಲ್ಲಿ ಸೀ ವೇವ್ ಬ್ರೇಕರ್ ಟೆಕ್ನಾಲಜಿಯನ್ನು ಇಲ್ಲಿ ಬಳಕೆ ಮಾಡಲು ತೀರ್ಮಾನ ಮಾಡಲಾಗಿದೆ. ಜನರಿಗೆ ಓಡಾಡುವ ವ್ಯವಸ್ಥೆ ಮಾಡಲಾಗುತ್ತಿದೆ. ಸರಿಯಾದ ಕೆಲಸ ಮಾಡುವ ಮೂಲಕ ಕಡಲ ಕೊರೆತ ಸಮಸ್ಯೆ ಶಾಶ್ವತ ಪರಿಹಾರಕ್ಕೆ ನಮ್ಮ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇವೆ ಎಂದರು.

ಭಾರಿ ಮಳೆಯಿಂದ ಸಂಕಷ್ಟಕ್ಕೆ ಈಡಾಗಿರುವವರ ರಕ್ಷಣಾ ಹಾಗೂ ಪರಿಹಾರ ಕಾರ್ಯಗಳಿಗೆ ಹಣದ ಕೊರತೆ ಇಲ್ಲ. ಈಗಾಗಲೇ ನಮ್ಮ ಬಳಿ ರಾಷ್ಟ್ರೀಯ ವಿಪತ್ತು ನಿರ್ವಹಣೆಗಾಗಿ 750 ಕೋಟಿ ರೂಪಾಯಿ ಹಣ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅತಿವೃಷ್ಠಿಯಿಂದ ಹಾನಿಗೊಳಗಾಗಿರುವವರ ರಕ್ಷಣಾ ಕಾರ್ಯಕ್ಕೆ ಈಗಾಗಲೇ ಜಿಲ್ಲಾಧಿಕಾರಿಗಳ‌ ಬಳಿ ಹಣ ಇದೆ. ಯಾವುದೇ ಕೊರತೆ ಆಗದ ರೀತಿಯಲ್ಲಿ ನಾವು ನೋಡಿಕೊಳ್ಳುತ್ತೇವೆ ಎಂದರು.

 

Vishwa News 24

Recent Posts

ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ – vishwanews24

ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…

4 hours ago

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…

7 hours ago

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ – vishwanews24

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…

8 hours ago

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ – vishwanews24

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…

9 hours ago

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ – vishwanews24

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…

11 hours ago

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ – vishwanews24

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…

11 hours ago