Featured

ಉಳ್ಳಾಲ ಸೇತುವೆಯಲ್ಲಿ ಅಹಿತಕರ ಘಟನೆಗಳನ್ನು ತಡೆಯಲು ಸೇತುವೆಗೆ ಸಿಸಿ ಕ್ಯಾಮೆರಾ, ಎತ್ತರದ ಗ್ರೀಲ್ ಅಳವಡಿಸಲು ಜಿಲ್ಲಾಧಿಕಾರಿಯೊಂದಿಗೆ ಶಾಸಕ ಕಾಮತ್ ಚರ್ಚೆ -Vishwanews24

ಮಂಗಳೂರು : ನೇತ್ರಾವತಿ ಸೇತುವೆ ಅಥವಾ ಉಳ್ಳಾಲ ಸೇತುವೆಯಲ್ಲಿ ಆತ್ಮಹತ್ಯೆಯಂತಹ ಅಹಿತಕರ ಘಟನೆಗಳು ಹೆಚ್ಚಾಗುತ್ತಿರುವುದನ್ನು ತಡೆಯಲು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

ಅಲ್ಲಿ ಎರಡು ಸೇತುವೆಗಳಿದ್ದು ಎರಡಕ್ಕೂ ಸೂಕ್ತ ವ್ಯವಸ್ಥೆ ಮಾಡಬೇಕಿದೆ. ಎರಡೂ ಸೇತುವೆಗಳ ನಾಲ್ಕು ಬದಿಗಳಲ್ಲಿಯೂ ಕನಿಷ್ಟ 5 ರಿಂದ 6 ಅಡಿಗಳಷ್ಟು ಎತ್ತರದ ಗ್ರೀಲ್ ಹಾಕಿ ಫೈಬರ್ ತಡೆಗೋಡೆಯ ತರಹ ವ್ಯವಸ್ಥೆ ಮಾಡಿದರೆ ಅದು ಆತ್ಮಹತ್ಯೆಗೆ ಮುಂದಾಗುವವರಿಗೆ ತೊಡಕಾಗಲಿದೆ. ಇನ್ನು ಪಾರದರ್ಶಕ ಗೋಡೆ ತರಹದ ವ್ಯವಸ್ಥೆಯಿಂದ ನದಿಯ ಸೌಂದರ್ಯಕ್ಕೂ ದಕ್ಕೆ ಆಗುವುದಿಲ್ಲ ಎಂದು ಶಾಸಕರು ಸಲಹೆ ನೀಡಿದ್ದಾರೆ.

ಹಾಗೆ ಎರಡೂ ಸೇತುವೆಗಳ ಆಯಕಟ್ಟಿನ ಜಾಗಗಳಲ್ಲಿ ಸಿಸಿಕ್ಯಾಮೆರಾಗಳನ್ನು ಅಳವಡಿಸುವುದರಿಂದ ಅಹಿತಕರ ಘಟನೆ ನಡೆಯುವುದನ್ನು ತಡೆಯಲು ಸಹಕಾರಿಯಾಗಬಹುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ. ಎರಡೂ ಕಾಮಗಾರಿಗಳಿಗೆ ಕ್ರಿಯಾಯೋಜನೆಯನ್ನು ತಯಾರಿಸಲು ಶಾಸಕರು ತಿಳಿಸಿದ್ದು ಮುಂದಿನ ಕೆಲ ತಿಂಗಳಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ. ಆದರೆ ಆತ್ಮಹತ್ಯೆ ಮಾಡುವುದು ಸಮಸ್ಯೆಗೆ ಪರಿಹಾರ ಅಲ್ಲ ಎಂದು ಯುವಜನಾಂಗ ಮೊದಲು ಅರ್ಥ ಮಾಡಿಕೊಳ್ಳಬೇಕು ಎಂದು ಶಾಸಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಉದ್ಯಮಿ ಸಿದ್ಧಾರ್ಥ ಆತ್ಮಹತ್ಯೆಯ ನಂತರ ಕೆಲವೇ ದಿನಗಳಲ್ಲಿ ನಾಲ್ಕು ಜನ ಅಲ್ಲಿ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಅದರಲ್ಲಿ ಒಬ್ಬರು ಬದುಕಿ ಉಳಿದಿದ್ದಾರೆ. ಭವಿಷ್ಯದಲ್ಲಿ ನೇತ್ರಾವತಿ ಸೇತುವೆಗೆ ಸೂಸೈಡ್ ಪಾಯಿಂಟ್ ಎನ್ನುವ ಹಣೆಪಟ್ಟಿ ಬರದ ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಶಾಸಕ ಕಾಮತ್ ಜಿಲ್ಲಾಧಿಕಾರಿಯವರೊಂದಿಗೆ ಮಾತುಕತೆ ನಡೆಸಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

23 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

23 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

24 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago