ಮಂಗಳೂರು : ನೇತ್ರಾವತಿ ಸೇತುವೆ ಅಥವಾ ಉಳ್ಳಾಲ ಸೇತುವೆಯಲ್ಲಿ ಆತ್ಮಹತ್ಯೆಯಂತಹ ಅಹಿತಕರ ಘಟನೆಗಳು ಹೆಚ್ಚಾಗುತ್ತಿರುವುದನ್ನು ತಡೆಯಲು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.
ಅಲ್ಲಿ ಎರಡು ಸೇತುವೆಗಳಿದ್ದು ಎರಡಕ್ಕೂ ಸೂಕ್ತ ವ್ಯವಸ್ಥೆ ಮಾಡಬೇಕಿದೆ. ಎರಡೂ ಸೇತುವೆಗಳ ನಾಲ್ಕು ಬದಿಗಳಲ್ಲಿಯೂ ಕನಿಷ್ಟ 5 ರಿಂದ 6 ಅಡಿಗಳಷ್ಟು ಎತ್ತರದ ಗ್ರೀಲ್ ಹಾಕಿ ಫೈಬರ್ ತಡೆಗೋಡೆಯ ತರಹ ವ್ಯವಸ್ಥೆ ಮಾಡಿದರೆ ಅದು ಆತ್ಮಹತ್ಯೆಗೆ ಮುಂದಾಗುವವರಿಗೆ ತೊಡಕಾಗಲಿದೆ. ಇನ್ನು ಪಾರದರ್ಶಕ ಗೋಡೆ ತರಹದ ವ್ಯವಸ್ಥೆಯಿಂದ ನದಿಯ ಸೌಂದರ್ಯಕ್ಕೂ ದಕ್ಕೆ ಆಗುವುದಿಲ್ಲ ಎಂದು ಶಾಸಕರು ಸಲಹೆ ನೀಡಿದ್ದಾರೆ.
ಹಾಗೆ ಎರಡೂ ಸೇತುವೆಗಳ ಆಯಕಟ್ಟಿನ ಜಾಗಗಳಲ್ಲಿ ಸಿಸಿಕ್ಯಾಮೆರಾಗಳನ್ನು ಅಳವಡಿಸುವುದರಿಂದ ಅಹಿತಕರ ಘಟನೆ ನಡೆಯುವುದನ್ನು ತಡೆಯಲು ಸಹಕಾರಿಯಾಗಬಹುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ. ಎರಡೂ ಕಾಮಗಾರಿಗಳಿಗೆ ಕ್ರಿಯಾಯೋಜನೆಯನ್ನು ತಯಾರಿಸಲು ಶಾಸಕರು ತಿಳಿಸಿದ್ದು ಮುಂದಿನ ಕೆಲ ತಿಂಗಳಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ. ಆದರೆ ಆತ್ಮಹತ್ಯೆ ಮಾಡುವುದು ಸಮಸ್ಯೆಗೆ ಪರಿಹಾರ ಅಲ್ಲ ಎಂದು ಯುವಜನಾಂಗ ಮೊದಲು ಅರ್ಥ ಮಾಡಿಕೊಳ್ಳಬೇಕು ಎಂದು ಶಾಸಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉದ್ಯಮಿ ಸಿದ್ಧಾರ್ಥ ಆತ್ಮಹತ್ಯೆಯ ನಂತರ ಕೆಲವೇ ದಿನಗಳಲ್ಲಿ ನಾಲ್ಕು ಜನ ಅಲ್ಲಿ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಅದರಲ್ಲಿ ಒಬ್ಬರು ಬದುಕಿ ಉಳಿದಿದ್ದಾರೆ. ಭವಿಷ್ಯದಲ್ಲಿ ನೇತ್ರಾವತಿ ಸೇತುವೆಗೆ ಸೂಸೈಡ್ ಪಾಯಿಂಟ್ ಎನ್ನುವ ಹಣೆಪಟ್ಟಿ ಬರದ ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಶಾಸಕ ಕಾಮತ್ ಜಿಲ್ಲಾಧಿಕಾರಿಯವರೊಂದಿಗೆ ಮಾತುಕತೆ ನಡೆಸಿದ್ದಾರೆ.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…