ಉಳ್ಳಾಲ: ಸೊಮೇಶ್ವರ ಗ್ರಾಮ ಪಂಚಾಯತ್ ಪುರಸಭೆಯಾಗಿ ಮೇಲ್ದರ್ಜೆಗೇರಿದ ಬಳಿಕ ನಡೆದ ಪ್ರಥಮ ಚುನಾವಣೆಯಲ್ಲಿ ಬಿಜೆಪಿಯ16 ಅಭ್ಯರ್ಥಿಗಳು ಜಯ ಗಳಿಸುವ ಮೂಲಕ ಸ್ಪಷ್ಟ ಬಹುಮತದೊಂದಿಗೆ ಚೊಚ್ಚಲ ಪುರಸಭೆಯ ಆಡಳಿತದ ಚುಕ್ಕಾಣಿಯನ್ನು ಹಿಡಿದಿದ್ದು, ಕಾಂಗ್ರೆಸ್ 07 ಅಭ್ಯರ್ಥಿಗಳು ಜಯ ಗಳಿಸಿದ್ದಾರೆ.
ಪುರಸಭೆಯ ಎಲ್ಲಾ 23 ಸ್ಥಾನಗಳಿಗೆ ಸ್ಪರ್ಧಿಸಿದ್ದ ಬಿಜೆಪಿಯ 16 ಅಭ್ಯರ್ಥಿಗಳು ಜಯಗಳಿಸಿದ್ದು, 22 ಸ್ಥಾನಗಳಲ್ಲಿ ಸ್ಪರ್ಧೆ ನಡೆಸಿದ್ದ ಕಾಂಗ್ರೆಸ್ 7 ಸ್ಥಾನವನ್ನು ಪಡೆದುಕೊಂಡಿದೆ. ಕಾಂಗ್ರೆಸ್ ಬೆಂಬಲದಿಂದ ಸ್ಪರ್ಧಿಸಿದ್ದ 3ನೇ ಪ್ರಕಾಶ್ ನಗರ ವಾರ್ಡ್ ನಲ್ಲಿ ಸಿಪಿಐಎಂ ಅಭ್ಯರ್ಥಿ ಬಿಜೆಪಿ ಅಭ್ಯರ್ಥಿಯ ಎದುರು ಸೋಲನ್ನನುಭವಿಸಿದ್ದಾರೆ.
ಸೋಮೇಶ್ವರ ಪುರಸಭೆಗೆ ಡಿ. 27ರಂದು ನಡೆದ ಚುನಾವಣೆಯಲ್ಲಿ ಒಟ್ಟು 23 ಸ್ಥಾನಗಳಿಗೆ 50 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದರು. 18 ಕಡೆಗಳಲ್ಲಿ ಕಾಂಗ್ರೆಸ್ – ಬಿಜೆಪಿ ಅಭ್ಯರ್ಥಿಗಳ ನಡುವೆ ನೇರ ಸ್ಪರ್ಧೆಯಿದ್ದರೆ, ಒಂದು ವಾರ್ಡ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸಿಪಿಐಎಂ ಅಭ್ಯರ್ಥಿ ನೇರ ಸ್ಪರ್ಧೆಯಲ್ಲಿದ್ದರು. ನಾಲ್ಕು ವಾರ್ಡ್ ಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಿಪಿಐಎಂ, ಆಮ್ ಆದ್ಮಿ ಪಾರ್ಟಿಯಲ್ಲಿ ಸೋಷಿಯಲ್ ವಲ್ಫೇರ್ ಪಕ್ಷ ಮತ್ತು ಪಕ್ಷೇತರ ಅಭ್ಯರ್ಥಿ ಸ್ಪರ್ಧೆಯಲ್ಲಿದ್ದರು.
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…