ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕೆರೆಬೈಲು ಬಳಿ ಸ್ಕೂಟರ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕಾಸರಗೋಡು ಮಧೂರು ನಿವಾಸಿ ಸುಮಾ ನಾರಾಯಣ ಗಟ್ಟಿ ( 52) ಗುರುತಿಸಲಾಗಿದೆ.
ಮೂಲತ: ಬಂಟ್ವಾಳ ನೆಟ್ಲದವರಾಗಿದ್ದ ಇವರು ಭಾನುವಾರ ಮಧೂರಿನಿಂದ ಕುಟುಂಬದ ಮನೆ ಪಿಲಾರು ಅರಮನೆಯಲ್ಲಿ ನಡೆದ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಸಂಜೆ ಕಾಸರಗೋಡು ಕಡೆ ತೆರಳಲು ಸಹೋದರನ ಬೈಕ್ ನಲ್ಲಿ ತೊಕ್ಕೊಟ್ಟು ಜಂಕ್ಷನ್ ಗೆ ತೆರಳಿದವರು, ಜಪ್ಪಿನ ಮೊಗರು ಬಳಿಯ ಸಂಬಂಧಿಕರ ಮನೆಗೆ ತೆರಳಿ ವಾಪಾಸ್ ತೊಕ್ಕೊಟ್ಟು ಕಡೆ ಬರುವಾಗ ಈ ಅವಘಡ ಸಂಭವಿಸಿದೆ.
ತೊಕ್ಕೊಟ್ಟು ಜಂಕ್ಷನ್ ಬದಲು ಕೋಟೆಕಾರು ಬೀರಿವರೆಗೆ ಹೆದ್ದಾರಿಯಲ್ಲಿ ತೆರಳುತ್ತಿದ್ದಾಗ ತೊಕ್ಕೊಟ್ಟು ಪ್ಲೈಓವರ್ ಸಂಪರ್ಕಿಸುವ ಕೆರೆಬೈಲು ನಾಗನ ಕಟ್ಟೆ ಬಳಿ ಚಲಿಸುತ್ತಿದ್ದ ಸ್ಕೂಟರ್ ನಿಂದ ಸುಮಾ ಉರುಳಿ ಬಿದ್ದಿದ್ದಾರೆ.
ತಕ್ಷಣ ತಲೆಗೆ ಗಂಭೀರ ಗಾಯಗೊಂಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ಪತಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…