Categories: ಉಡುಪಿ

ಉಳ್ಳಾಲ: ಹೃದಯಾಘಾತದಿಂದ ವೈದ್ಯ ಡಾ.ಜಯರಾಮ ಶೆಟ್ಟಿ ನಿಧನ – Vishwanews24

ಉಳ್ಳಾಲ: ಹೃದಯಾಘಾತದಿಂದ ವೈದ್ಯ ಡಾ.ಜಯರಾಮ ಶೆಟ್ಟಿ ನಿಧನ

ಉಳ್ಳಾಲ: ದೇರಳಕಟ್ಟೆ ಯ ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ರೇಡಿಯೇಷನ್ ಆಂಕಾಲಜಿ ಕ್ಯಾನ್ಸರ್ ವಿಭಾಗದ ತಜ್ಞ ವೈದ್ಯರಾದ ಗುರುಪುರ ಪರಾರಿ ದೋಟ ಕೊಳಕೆಬೈಲು ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ವಾಸಿಸುತ್ತಿರುವ ಡಾ. ಜಯರಾಮ ಶೆಟ್ಟಿ(53) ಹೃದಯಾಘಾತದಿಂದ ಜ.11ರಂದು ಬುಧವಾರ ನಿಧನ ಹೊಂದಿದರು.

ಮಂಗಳೂರಿನ ಕೆ.ಎಂಸಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಸ್ನಾತಕೋತ್ತರ ಉನ್ನತ ಶಿಕ್ಷಣ ಪಡೆದ ಬಳಿಕ ಸುಮಾರು ಒಂದು ದಶಕಗಳಿಗಿಂತ ಹೆಚ್ಚು ಕಾಲ ರೇಡಿಯೇಷನ್ ಆಂಕಾಲಜಿ ಚಿಕಿತ್ಸಾ ವಿಭಾಗದಲ್ಲಿ ಸೇವೆ ಸಲ್ಲಿಸಿ ಕಳೆದ 11 ವರುಷಗಳಿಂದ ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ರೇಡಿಯೇಷನ್ ಅಂಕೋಲಾಜಿ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಬುಧವಾರ ಸಂಜೆಯವರೆಗೆ ಕಾರ್ಯ ನಿರ್ವಹಿಸಿ ಮನೆಗೆ ತೆರಳಿ, ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾರೆ. ಸಾಮಾಜಿಕವಾಗಿ ತೊಡಗಿಸಿಕೊಂಡಿದ್ದ ಅವರು ಅನೇಕ ಬಡ ರೋಗಿಗಳ ಚಿಕಿತ್ಸೆಗೆ ಸಹಾಯಹಸ್ತ ನೀಡುತ್ತಿದ್ದರು.

ಡಾ. ಜಯರಾಮ ಶೆಟ್ಟಿ ನಿಧನಕ್ಕೆ ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಾಧಿಪತಿ ಎನ್. ವಿನಯ ಹೆಗ್ಡೆ, ಆಡಳಿತ ಮಂಡಳಿ, ಜಸ್ಟೀಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ. ಇವರು ಪತ್ನಿ ಜ್ಯೋತಿ, ಪುತ್ರಿ ವೀಕ್ಷಣಾ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Vishwa News 24

Recent Posts

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

5 seconds ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

14 minutes ago

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

23 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 day ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

1 day ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

1 day ago