ಬೆಂಗಳೂರು: ಶಿರೂರು ಟೋಲ್ ಗೇಟ್ ನಲ್ಲಿ ಇತ್ತೀಚೆಗೆ ನಡೆದ ಆಯಂಬುಲೆನ್ಸ್ ಅಪಘಾತದ ಬಳಿಕ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಿಸಬೇಕು ಎಂಬ ಆಗ್ರಹ ಮತ್ತೆ ಮುನ್ನೆಲೆಗೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಅಭಿಯಾನಗಳು ನಡೆಯುತ್ತಿದೆ.
ಇದೇ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರೂ ಸರ್ಕರದ ಗಮನ ಸೆಳೆಯುವ ಕೆಲಸ ಮಾಡಿದ್ದರು.
ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಕೆ.ಸುಧಾಕರ್, ”ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್ ಅವಶ್ಯಕತೆ ಇದೆ ಎಂಬ ಸಾರ್ವಜನಿಕರ ಬೇಡಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಗಮನಿಸಿದ್ದೇನೆ. ಕಾರವಾರದ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಸ್ಥಾಪನೆ ಹಾಗೂ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಶೀಘ್ರವೇ ಸೂಕ್ತ ತೀರ್ಮಾನ ಕೈಗೊಳ್ಳುವ ಭರವಸೆ ನೀಡುತ್ತಿದ್ದೇನೆ ಎಂದಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಆರೋಗ್ಯ ಮೂಲಸೌಕರ್ಯ ಅಗತ್ಯತೆಗಳ ಕುರಿತಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳೊಂದಿಗೆ ಶೀಘ್ರವೇ ಸಭೆ ನಡೆಸಿ ಆದಷ್ಟು ಬೇಗ ಒಂದು ಕ್ರಿಯಾಯೋಜನೆ ರೂಪಿಸಿ ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸುಧಾಕರ್ ಹೇಳಿಕೆ ನೀಡಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…