Featured

ಉ.ಪ್ರ.: ಹಿಂಸೆಯ ಮಾಸ್ಟರ್‌ಮೈಂಡ್‌ನ ಅಕ್ರಮ ಮನೆ ಜೆಸಿಬಿ ಬಳಸಿ ಧ್ವಂಸ – Vishwanews24

ಉ.ಪ್ರ.: ಹಿಂಸೆಯ ಮಾಸ್ಟರ್‌ಮೈಂಡ್‌ನ ಅಕ್ರಮ ಮನೆ ಜೆಸಿಬಿ ಬಳಸಿ ಧ್ವಂಸ

ಲಖನೌ: ಉತ್ತರ ಪ್ರದೇಶದಾದ್ಯಂತ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿದ್ದರು ಎನ್ನಲಾದ ಮುಸ್ಲಿಂ ವ್ಯಕ್ತಿಗಳ ಮನೆಗಳನ್ನು ನೆಲಸಮ ಮಾಡಲಾಗಿದೆ. ಬಿಜೆಪಿ ವಕ್ತಾರೆಯಾಗಿದ್ದ ನೂಪುರ್‌ ಶರ್ಮಾ ಅವರು ಪ್ರವಾದಿ ಮಹಮ್ಮದ್‌ ಅವರ ಬಗ್ಗೆ ನೀಡಿದ ‘ಅವಹೇಳನಕಾರಿ’ ಹೇಳಿಕೆಯನ್ನು ಖಂಡಿಸಿ ಈ ಪ್ರತಿಭಟನೆ ನಡೆಸಲಾಗಿದೆ. ಈ ಮನೆಗಳು ‘ಅಕ್ರಮ’ ಎಂಬ ಕಾರಣಕ್ಕೆ ಸ್ಥಳೀಯಾಡಳಿತ ಸಂಸ್ಥೆಗಳು ಮನೆ ಧ್ವಂಸ ಕಾರ್ಯಾಚರಣೆ ನಡೆಸಿವೆ.

ಪ್ರಯಾಗರಾಜ್‌ನಲ್ಲಿ ನಡೆದ ಪ್ರತಿಭಟನೆಯ ಪಿತೂರಿ ರೂಪಿಸಿದ ಆರೋಪ ಹೊತ್ತಿರುವ ಜಾವೇದ್‌ ಮಹಮ್ಮದ್‌ ಅವರ ಮನೆಯ ಒಂದು ಭಾಗವನ್ನು ಬುಲ್ಡೋಜರ್ ಬಳಸಿ ಭಾನುವಾರ ಉರುಳಿಸಲಾಗಿದೆ. ಈ ಮನೆಯ ಒಂದು ಭಾಗವು ‘ಅಕ್ರಮ’ ಎಂದು ಹೇಳಲಾಗಿದೆ. ಅವರಿಗೆ ಹಲವು ಬಾರಿ ನೋಟಿಸ್‌ ನೀಡಲಾಗಿದೆ ಎಂದು ಸ್ಥಳೀಯಾಡಳಿತ ಹೇಳಿದೆ.

ಪಾಪ್ಯುಲರ್ ಫ್ರಂಟ್‌ ಆಫ್ ಇಂಡಿಯಾಕ್ಕೆ ಸಂಬಂಧಿಸಿದ ಸಾಹಿತ್ಯ, ಬಾವುಟ ಸೇರಿ ‘ಆಕ್ಷೇಪಾರ್ಹ’ವಾದ ಕೆಲವು ವಸ್ತುಗಳು ಜಾವೇದ್‌ ಮನೆಯಲ್ಲಿ ಸಿಕ್ಕಿವೆ ಎಂದು ಪೊಲೀಸರು ಹೇಳಿದ್ದಾರೆ.

ಕಾನ್ಪುರ ಮತ್ತು ಸಹಾರನ್‌ಪುರದಲ್ಲಿ ಕೂಡ ಪ್ರತಿಭಟನಕಾರರಲ್ಲಿ ಕೆಲವರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ. ‘ಸಿ.ಸಿ.ಟಿ.ವಿ ಕ್ಯಾಮರಾ ದೃಶ್ಯಗಳ ಆಧಾರದಲ್ಲಿ ಪ್ರತಿಭಟನಕಾರರನ್ನು ಗುರುತಿಸಲು ಪ್ರಯತ್ನಿಸಲಾಗುತ್ತಿದೆ. ಪ್ರತಿಭಟನಕಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ನಡೆದ ಪ್ರಯಾಗರಾಜ್‌, ಸಹಾರನ್‌ಪುರ, ಮೊರಾದಾಬಾದ್‌, ಹಾಥರಸ್‌, ಕಾನ್ಪುರ ಮತ್ತು ಇತರ ಸ್ಥಳಗಳಲ್ಲಿ ಇನ್ನಷ್ಟು ಮನೆಗಳನ್ನು ಉರುಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.  ‘ಗಲಭೆಕೋರ’ರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

3 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

3 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

3 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

3 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

3 days ago