Featured

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ

ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ ಭೀಕರ ದುರ್ಘಟನೆಯಲ್ಲಿ ಮೃತಪಟ್ಟ ಕಾರ್ಮಿಕ ಮನೀಶ್ ಕಾರ್ಕಡ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ, ಕಾರ್ಮಿಕರು ಇಂದು (ಆ.1) ಮುಷ್ಕರ ನಡೆಸಿದರು. ಕಾರ್ಗೋ ಗೇಟ್ ಮುಂಭಾಗ ಜಮಾಯಿಸಿದ ನೂರಾರು ಕಾರ್ಮಿಕರು, ಮೃತರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ನಡೆಸಿದರು.

ಈ ಸಂದರ್ಭದಲ್ಲಿ ಕಾರ್ಮಿಕ ಸಂಘಟನೆಗಳು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟವು. ಮೃತ ಮನೀಶ್ ಕಾರ್ಕಡ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡಬೇಕು, ಮನೆಯವರಲ್ಲಿ ಒಬ್ಬರಿಗೆ ಉದ್ಯೋಗ ಕಲ್ಪಿಸಬೇಕು, ಎಂಆರ್‌ಪಿಎಲ್‌ನಲ್ಲಿ ದುಡಿಯುವ ಎಲ್ಲ ಕಾರ್ಮಿಕ ವರ್ಗಕ್ಕೆ ಆರೋಗ್ಯ ವಿಮೆ ಜಾರಿಗೊಳಿಸಬೇಕು ಎಂದು ಆಗ್ರಹಿಸಲಾಯಿತು. ಇದರೊಂದಿಗೆ ಕೆಲಸದ ಸ್ಥಳದಲ್ಲಿ ಸೂಕ್ತ ಸುರಕ್ಷತಾ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಲಾಯಿತು.

ಸ್ಥಳದಲ್ಲಿ ಶಾಸಕ ಉಮಾನಾಥ ಕೋಟ್ಯಾನ್, ಸತ್ಯಜಿತ್ ಸುರತ್ಕಲ್, ಭರತ್ ರಾಜ್ ಕೃಷ್ಣಾಪುರ, ಪ್ರಶಾಂತ್ ಮೂಡಾಯಿಕೋಡಿ ಮತ್ತಿತರರು ಉಪಸ್ಥಿತರಿದ್ದರು. ಶಾಸಕ ಉಮಾನಾಥ ಕೋಟ್ಯಾನ್ ಅವರ ಉಪಸ್ಥಿತಿಯಲ್ಲಿ ಬೇಡಿಕೆ ಪಟ್ಟಿಯನ್ನು ಮಂಡಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.

ಸಭೆಯಲ್ಲಿ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದರು ಎಂದು ತಿಳಿದುಬಂದಿದೆ. ಸುರಕ್ಷತಾ ಕ್ರಮಗಳನ್ನು ಬಿಗಿಗೊಳಿಸಿ, ಕಾರ್ಮಿಕರ ಹಿತರಕ್ಷಣೆಗೆ ಆದ್ಯತೆ ನೀಡುವುದಾಗಿ ಭರವಸೆ ನೀಡಲಾಗಿದೆ.

Vishwa News 24

Recent Posts

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

29 minutes ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

51 minutes ago

ಮಡ್‌ಗಾಂವ್‌ – ಮಂಗಳೂರು ‘ವಂದೇ ಭಾರತ್‌’ ರೈಲು ಬೆಂಗಳೂರಿಗೆ ವಿಸ್ತರಣೆ -vishwanews24

ಮಡ್‌ಗಾಂವ್‌ - ಮಂಗಳೂರು 'ವಂದೇ ಭಾರತ್‌' ರೈಲು ಬೆಂಗಳೂರಿಗೆ ವಿಸ್ತರಣೆ ಮಂಗಳೂರು/ಉಡುಪಿ: ಈ ಹಿಂದೆ ಮಂಗಳೂರು ಸೆಂಟ್ರಲ್‌-ಮಡ್‌ಗಾಂವ್‌ ನಡುವೆ ಓಡುತ್ತಿದ್ದ…

2 hours ago

ಅಕ್ಟೋಬರ್ 11ರಿಂದ 20ರ ವರೆಗೆ KSRTC ಯಿಂದ ವಿಶೇಷ ಪ್ಯಾಕೇಜ್ ಪ್ರವಾಸ -vishwanews24

ಅಕ್ಟೋಬರ್ 11ರಿಂದ 20ರ ವರೆಗೆ KSRTC ಯಿಂದ ವಿಶೇಷ ಪ್ಯಾಕೇಜ್ ಪ್ರವಾಸ ಉಡುಪಿ: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ…

3 hours ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 62 ರೂ. ಏರಿಕೆ -vishwanews24

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 62 ರೂ. ಏರಿಕೆ ನವದೆಹಲಿ: ಹಬ್ಬದ ಹೊಸ್ತಿಲಲ್ಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಗಣನೀಯ…

3 hours ago

ಮಂಗಳೂರು: ಎಂಆರ್ ಪಿಎಲ್ ದುರಂತ : ಕಂಪನಿ ಅಧಿಕಾರಿಗಳ ವಿರುದ್ಧ ಎಫ್ಐಆರ್ -vishwanews24

ಮಂಗಳೂರು: ಎಂಆರ್ ಪಿಎಲ್ ದುರಂತ : ಕಂಪನಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ಮಂಗಳೂರು : ಎಂಆರ್ ಪಿಎಲ್ ತೈಲ ಸ್ಥಾವರ…

3 hours ago