Featured

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ

ಮಂಗಳೂರು: ಸ್ಫೋಟದ ನಿಖರ ಕಾರಣ ಪತ್ತೆಗೆ ಸಮಗ್ರ ತನಿಖೆ ಅಗತ್ಯವಿದ್ದು, ಇಂಥ ದುರ್ಘ‌ಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು. ಮೃತ ಕಾರ್ಮಿಕರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಒದಗಿಸುವುದಲ್ಲದೆ, ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಕಂಪೆನಿಯೇ ಭರಿಸಿ, ಸೂಕ್ತ ಪರಿಹಾರ ನೀಡಬೇಕು ಎಂದು ಶಾಸಕ ಡಾ| ಭರತ್‌ ಶೆಟ್ಟಿ ಆಗ್ರಹಿಸಿದ್ದಾರೆ.

ಎಂಆರ್‌ಪಿಎಲ್‌ ಸ್ಥಾವರಕ್ಕೆ ಭೇಟಿ ನೀಡಿದ ಅವರು, ಇದು ಎಚ್ಚರಿಕೆಯ ಸಂದೇಶವಾಗಿದೆ. ಮೊದಲ ವರದಿಯಲ್ಲಿ 9 ಕಾರ್ಮಿಕರು ಗಾಯಗೊಂಡಿದ್ದಾರೆ ಎಂದಿತ್ತು. ಬಳಿಕ ನೌಕರ ಮೃತಪಟ್ಟಿರುವುದು ತಿಳಿದು ಬಂದಿತು ಎಂದರು.

ಇಂತಹ ಅಪಾಯಕಾರಿ ಸ್ಥಳದಲ್ಲಿ ಕೆಲಸ ಮಾಡುವ ನೌಕರವೃಂದಕ್ಕೆ ಸಂಸ್ಥೆಯು ಆರೋಗ್ಯ ಸುರಕ್ಷಾ ಸೌಲಭ್ಯವನ್ನು ಕೂಡಲೇ ಜಾರಿ ಮಾಡಬೇಕು. ಅಗತ್ಯ ಮೂಲಸೌಕರ್ಯ ಒದಗಿಸಲಾಗಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು. ಸ್ಫೋಟದಿಂದ ಸುತ್ತಮುತ್ತಲಿನ ಮನೆ, ಕಟ್ಟಡಗಳಿಗೆ ಹಾನಿಯಾಗಿದ್ದಲ್ಲಿ ಪರಿಶೀಲಿಸಿ ಪರಿಹಾರ ನೀಡಬೇಕು ಎಂದು ಅವರು ಹೇಳಿದರು. ಬಳಿಕ ವೆನಾÉಕ್‌ ಆಸ್ಪತ್ರೆಗೆ ಭೇಟಿ ನೀಡಿ ಮೃತ ನೌಕರರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

Vishwa News 24

Recent Posts

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

8 minutes ago

ಮಡ್‌ಗಾಂವ್‌ – ಮಂಗಳೂರು ‘ವಂದೇ ಭಾರತ್‌’ ರೈಲು ಬೆಂಗಳೂರಿಗೆ ವಿಸ್ತರಣೆ -vishwanews24

ಮಡ್‌ಗಾಂವ್‌ - ಮಂಗಳೂರು 'ವಂದೇ ಭಾರತ್‌' ರೈಲು ಬೆಂಗಳೂರಿಗೆ ವಿಸ್ತರಣೆ ಮಂಗಳೂರು/ಉಡುಪಿ: ಈ ಹಿಂದೆ ಮಂಗಳೂರು ಸೆಂಟ್ರಲ್‌-ಮಡ್‌ಗಾಂವ್‌ ನಡುವೆ ಓಡುತ್ತಿದ್ದ…

2 hours ago

ಅಕ್ಟೋಬರ್ 11ರಿಂದ 20ರ ವರೆಗೆ KSRTC ಯಿಂದ ವಿಶೇಷ ಪ್ಯಾಕೇಜ್ ಪ್ರವಾಸ -vishwanews24

ಅಕ್ಟೋಬರ್ 11ರಿಂದ 20ರ ವರೆಗೆ KSRTC ಯಿಂದ ವಿಶೇಷ ಪ್ಯಾಕೇಜ್ ಪ್ರವಾಸ ಉಡುಪಿ: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ…

2 hours ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 62 ರೂ. ಏರಿಕೆ -vishwanews24

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 62 ರೂ. ಏರಿಕೆ ನವದೆಹಲಿ: ಹಬ್ಬದ ಹೊಸ್ತಿಲಲ್ಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಗಣನೀಯ…

2 hours ago

ಮಂಗಳೂರು: ಎಂಆರ್ ಪಿಎಲ್ ದುರಂತ : ಕಂಪನಿ ಅಧಿಕಾರಿಗಳ ವಿರುದ್ಧ ಎಫ್ಐಆರ್ -vishwanews24

ಮಂಗಳೂರು: ಎಂಆರ್ ಪಿಎಲ್ ದುರಂತ : ಕಂಪನಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ಮಂಗಳೂರು : ಎಂಆರ್ ಪಿಎಲ್ ತೈಲ ಸ್ಥಾವರ…

2 hours ago

ಎಂಆರ್‌ಪಿಎಲ್‌ ದುರಂತ: ಸಮಗ್ರ ತನಿಖೆಗೆ ಐವನ್ ಡಿʼಸೋಜಾ ಆಗ್ರಹ -vishwanews24

ಎಂಆರ್‌ಪಿಎಲ್‌ ದುರಂತ: ಆಸ್ತಿ-ಪಾಸ್ತಿ ನಷ್ಟಕ್ಕೆ ಸೂಕ್ತ ಪರಿಹಾರ , ಸಮಗ್ರ ತನಿಖೆಗೆ ಐವನ್ ಡಿʼಸೋಜಾ ಆಗ್ರಹ ಮಂಗಳೂರು :ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ…

2 hours ago