ಬೆಂಗಳೂರು: ಬೆಂಗಳೂರಿನ ಕನ್ನಡ ಒಕ್ಕೂಟ ಸಂಘಟನೆಗಳಿಂದ ಎಂಇಎಸ್ ಪುಂಡಾಟ ಖಂಡಿಸಿ ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಎಂಇಎಸ್‍ಗೆ ಇವತ್ತೆ ನಿಷೇಧ ಹೇರಿ ಇಲ್ಲದಿದ್ದರೆ ಕರ್ನಾಟಕ ಬಂದ್‍ಗೆ ಕರೆ ನೀಡಲಾಗುವುದಾಗಿ ವಾಟಾಳ್, ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಡೆದ ಪ್ರತಿಭಟನೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾವಚಿತ್ರಕ್ಕೆ ಬೆಂಕಿ ಹಾಕುವ ಮೂಲಕ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ಕರ್ನಾಟಕದಲ್ಲಿ ಇದು ಕಣ್ಣೀರ ಕಥೆ. ನಿಜಕ್ಕೂ ನಾವು ಇದನ್ನು ಗಂಭೀರವಾಗಿ ಯೋಜನೆ ಮಾಡಬೇಕು. ಎಂಇಎಸ್‍ನವರ ಪುಂಡಾಟವನ್ನು ಕೊನೆಗೊಳಿಸಬೇಕು. ಈ ಕಾರಣಕ್ಕಾಗಿ ಎಂಇಎಸ್ ನಿಷೇಧ ಆಗಲೇಬೇಕು. ಇವತ್ತೇ ಕಲಾಪದಲ್ಲಿ ತೀರ್ಮಾನ ಮಾಡಿ ರಾತ್ರಿ ಎಷ್ಟು ಹೊತ್ತು ಆದರೂ ನಿಷೇಧ ಆಗಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಗ್ಗೆ ನಮಗೆ ಗೌರವ ಇದೆ. ಆದರೆ ಅವರು ಧೈರ್ಯ ತೆಗೆದುಕೊಳ್ಳಬೇಕು ಎಂದರು.
ಬಿಜೆಪಿ, ಆರ್‌ಎಸ್‌ಎಸ್‌ನವರಿಗೆ ಮರಾಠರನ್ನು ಕಂಡರೆ ಪ್ರೀತಿ. ನಮ್ಮ ಕೆಲ ಶಾಸಕರು ಮಂತ್ರಿಗಳೇ ಮರಾಠರ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಗೌರವ ಅಲ್ಲ. ಇವತ್ತು ಎಂಇಎಸ್ ನಿಷೇಧ ಆಗಲಿಲ್ಲ ಅಂದರೆ ನಾಡಿದ್ದು ಕನ್ನಡ ಒಕ್ಕೂಟ ಎಲ್ಲಾ ವರ್ಗದ ಸಂಘಟನೆಗಳನ್ನು ಕರೆದು ಸಭೆ ಮಾಡಿ ಕರ್ನಾಟಕ ಬಂದ್‍ಗೆ ಕರೆ ನೀಡುತ್ತೇವೆ. ಆ ದಿನ 1 ಲಕ್ಷಕ್ಕೂ ಹೆಚ್ಚು ಜನ ಸೇರಿ ತೀವ್ರ ಹೋರಾಟಕ್ಕೆ ಕರೆ ಕೊಡುವುದಾಗಿ ಎಚ್ಚರಿಕೆ ನೀಡಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…