Featured

ಎಂಇಎಸ್‍ಗೆ ನಿಷೇಧ ಹೇರಿ ಇಲ್ಲದಿದ್ದರೆ ಕರ್ನಾಟಕ ಬಂದ್‍ಗೆ ಕರೆ : ವಾಟಾಳ್ ನಾಗರಾಜ್ ಎಚ್ಚರಿಕೆ – Vishwanews24

ಎಂಇಎಸ್‍ಗೆ ನಿಷೇಧ ಹೇರಿ ಇಲ್ಲದಿದ್ದರೆ ಕರ್ನಾಟಕ ಬಂದ್‍ಗೆ ಕರೆ : ವಾಟಾಳ್ ನಾಗರಾಜ್ ಎಚ್ಚರಿಕೆ – Vishwanews24

ಬೆಂಗಳೂರು: ಬೆಂಗಳೂರಿನ ಕನ್ನಡ ಒಕ್ಕೂಟ ಸಂಘಟನೆಗಳಿಂದ ಎಂಇಎಸ್ ಪುಂಡಾಟ ಖಂಡಿಸಿ ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಎಂಇಎಸ್‍ಗೆ ಇವತ್ತೆ ನಿಷೇಧ ಹೇರಿ ಇಲ್ಲದಿದ್ದರೆ ಕರ್ನಾಟಕ ಬಂದ್‍ಗೆ ಕರೆ ನೀಡಲಾಗುವುದಾಗಿ ವಾಟಾಳ್, ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಡೆದ ಪ್ರತಿಭಟನೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾವಚಿತ್ರಕ್ಕೆ ಬೆಂಕಿ ಹಾಕುವ ಮೂಲಕ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ಕರ್ನಾಟಕದಲ್ಲಿ ಇದು ಕಣ್ಣೀರ ಕಥೆ. ನಿಜಕ್ಕೂ ನಾವು ಇದನ್ನು ಗಂಭೀರವಾಗಿ ಯೋಜನೆ ಮಾಡಬೇಕು. ಎಂಇಎಸ್‍ನವರ ಪುಂಡಾಟವನ್ನು ಕೊನೆಗೊಳಿಸಬೇಕು. ಈ ಕಾರಣಕ್ಕಾಗಿ ಎಂಇಎಸ್ ನಿಷೇಧ ಆಗಲೇಬೇಕು. ಇವತ್ತೇ ಕಲಾಪದಲ್ಲಿ ತೀರ್ಮಾನ ಮಾಡಿ ರಾತ್ರಿ ಎಷ್ಟು ಹೊತ್ತು ಆದರೂ ನಿಷೇಧ ಆಗಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಗ್ಗೆ ನಮಗೆ ಗೌರವ ಇದೆ. ಆದರೆ ಅವರು ಧೈರ್ಯ ತೆಗೆದುಕೊಳ್ಳಬೇಕು ಎಂದರು.

ಬಿಜೆಪಿ, ಆರ್‌ಎಸ್‌ಎಸ್‌ನವರಿಗೆ ಮರಾಠರನ್ನು ಕಂಡರೆ ಪ್ರೀತಿ. ನಮ್ಮ ಕೆಲ ಶಾಸಕರು ಮಂತ್ರಿಗಳೇ ಮರಾಠರ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಗೌರವ ಅಲ್ಲ. ಇವತ್ತು ಎಂಇಎಸ್ ನಿಷೇಧ ಆಗಲಿಲ್ಲ ಅಂದರೆ ನಾಡಿದ್ದು ಕನ್ನಡ ಒಕ್ಕೂಟ ಎಲ್ಲಾ ವರ್ಗದ ಸಂಘಟನೆಗಳನ್ನು ಕರೆದು ಸಭೆ ಮಾಡಿ ಕರ್ನಾಟಕ ಬಂದ್‍ಗೆ ಕರೆ ನೀಡುತ್ತೇವೆ. ಆ ದಿನ 1 ಲಕ್ಷಕ್ಕೂ ಹೆಚ್ಚು ಜನ ಸೇರಿ ತೀವ್ರ ಹೋರಾಟಕ್ಕೆ ಕರೆ ಕೊಡುವುದಾಗಿ ಎಚ್ಚರಿಕೆ ನೀಡಿದರು.

Vishwa News 24

Recent Posts

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

29 minutes ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

48 minutes ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

1 hour ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

3 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

3 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

23 hours ago