ಚಿಕ್ಕಮಗಳೂರು: ಬೆಳಗಾವಿಯಲ್ಲಿ ಉದ್ದೇಶಪೂರ್ವಕವಾಗಿ ಗಲಭೆಗಳನ್ನು ಮಾಡುತ್ತಿದ್ದಾರೆ. ಎಂಇಎಸ್ ಪುಂಡಾಟಿಕೆಯ ಜೊತೆ ಕಾಂಗ್ರೆಸ್ ಇರುವ ಗುಮಾನಿ ಕೂಡ ಕಾಡುತ್ತಿದೆ. ಎಂಇಎಸ್ ಇರಬೇಕಾದದ್ದು ಮಹಾರಾಷ್ಟ್ರದಲ್ಲಿ ಕರ್ನಾಟಕದಲ್ಲಿ ಅಲ್ಲ. ಸರ್ಕಾರಕ್ಕೆ ಕೆಟ್ಟ ಹೆಸರು ತಂದು, ಅಧಿವೇಶನವನ್ನು ವಿಫಲಗೊಳಿಸುವ ವ್ಯವಸ್ಥಿತಿ ಷಡ್ಯಂತ್ರ ನಡೆಯುತ್ತಿದೆ, ಇದರ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಎಂಇಎಸ್ ಹಾಗೂ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಚಿಕ್ಕಮಗಳೂರು ನಗರದಲ್ಲಿ ನಗರಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕನ್ನಡಿಗರು-ಮರಾಠಿಗರು ಎಂದು ಬೇಧ-ಭಾವವಿಲ್ಲ, ಅನುದಾನ ಹಾಗೂ ಯೋಜನೆಗಳನ್ನು ಇಬ್ಬರಿಗೂ ಸಮಾನವಾಗಿ ನೀಡಿದ್ದೇವೆ. ಎಲ್ಲಾ ಧರ್ಮದವರಿಗೂ ಕೊಟ್ಟಿದ್ದೇವೆ. ಹಿಂದೂ-ಮುಸ್ಲಿಂ-ಕ್ರೈಸ್ತ ಎಲ್ಲರಿಗೂ ಏಕಪ್ರಕಾರವಾಗಿ ನೀಡಿದ್ದೇವೆ ಎಂದರು.
ಬೆಳಗಾವಿ, ಬೀದರ್, ಬಿಜಾಪುರ, ಚಿಕ್ಕೋಡಿ ಭಾಗದವರಿಗೆ ಅನ್ಯಾಯ ಮಾಡಿಲ್ಲ. ಅವರನ್ನು ಒಂದೇ ತಾಯಿ ಮಕ್ಕಳಂತೆ ನೋಡಿದ್ದೇವೆ. ಅನಾವಶ್ಯಕವಾಗಿ, ರಾಜಕೀಯ ಪ್ರೇರಿತವಾಗಿ ನಡೆಯುತ್ತಿರುವ ಗಲಭೆಗಳ ಬಗ್ಗೆ ನಾವು ಎಚ್ಚರಗೊಳ್ಳಬೇಕು. ಕನ್ನಡಿಗರು-ಮರಾಠಿಗರು, ಜಾತಿ-ಧರ್ಮ ಎಂಬುದನ್ನು ನೋಡದೆ ಬಿಜೆಪಿ ಸರ್ಕಾರ ಏಖಮುಖವಾಗಿ ಯೋಜನೆ-ಅನುದಾನ ಕೊಡುತ್ತಿದ್ದೇವೆ. ಈಗಾಗಲೇ ಗಲಭೆಕೋರನ್ನು ಬಂಧಿಸಿ ಗೂಂಡಾ ಕಾಯ್ದೆ, ದೇಶದ್ರೋಹದ ಕಾಯ್ದೆಯಡಿ ಕ್ರಮಕೈಗೊಳ್ಳಲು ಸರ್ಕಾರ ಮುಂದಾಗಿದೆ. ಇಂದು ಕೂಡ ಕಲ್ಲು ಬಿಸಾಡಿದ್ದಾರೆ. ಬಸ್‍ಗಳು ನಿಂತಿದ್ದಾವೆ ಎಂಬ ವರದಿ ಇದೆ. ಬೆಳಗಾವಿಯ ಘಟನೆಗೆ ಮಹಾರಾಷ್ಟ್ರ ಸರ್ಕಾರವೇ ಇದಕ್ಕೆ ಕುಮ್ಮುಕ್ಕು ನೀಡುತ್ತಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…