Featured

ಎಂಜಿನಿಯರ್‌ ಮೇಲೆ ಕೆಸರು ಸುರಿದ ಪ್ರಕರಣ : ಮಹಾರಾಷ್ಟ್ರ ಸಚಿವ ನಿತೇಶ್ ನಾರಾಯಣ ರಾಣೆಗೆ 1 ತಿಂಗಳು ಜೈಲು ಶಿಕ್ಷೆ – vishwanews24

ಎಂಜಿನಿಯರ್‌ ಮೇಲೆ ಕೆಸರು ಸುರಿದ ಪ್ರಕರಣ:ಮಹಾರಾಷ್ಟ್ರ ಸಚಿವ ನಿತೇಶ್ ನಾರಾಯಣ ರಾಣೆಗೆ 1 ತಿಂಗಳು ಜೈಲು ಶಿಕ್ಷೆ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮೀನುಗಾರಿಕೆ ಮತ್ತು ಬಂದರು ಅಭಿವೃದ್ಧಿ ಸಚಿವ ನಿತೇಶ್ ನಾರಾಯಣ ರಾಣೆ ಅವರಿಗೆ ಸ್ಥಳೀಯ ಕೋರ್ಟ್‌  ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ  ಎಂಜಿನಿಯರ್‌ ಮೇಲೆ ಕೆಸರು ಸುರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಧುದುರ್ಗದ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ನಿತೇಶ್ ರಾಣೆ ಅವರನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 (ಸಾರ್ವಜನಿಕ ಶಾಂತಿಗೆ ಭಂಗ ತರುವ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ದೋಷಿ ಎಂದು ಘೋಷಿಸಿದೆ.

ಇದನ್ನೂ ಓದಿ:

ನ್ಯಾಯಾಲಯ ಒಂದು ತಿಂಗಳ ಜೈಲು ಶಿಕ್ಷೆಯ ಜೊತೆ 1 ಲಕ್ಷ ರೂಪಾಯಿ ದಂಡ ವಿಧಿಸಿದೆ. ಈ ಮೊತ್ತದಲ್ಲಿ 50 ಸಾವಿರ ರೂ.ಗಳನ್ನು ಸಂತ್ರಸ್ತ ಎಂಜಿನಿಯರ್‌ಗೆ ಪರಿಹಾರವಾಗಿ ನೀಡಲು ಆದೇಶಿಸಿದೆ. ಶಾಸಕರು ಕಾನೂನನ್ನು ಕೈಗೆತ್ತಿಕೊಳ್ಳಬಾರದು ಮತ್ತು ಸಾರ್ವಜನಿಕ ಸೇವಕರ ಘನತೆಗೆ ಧಕ್ಕೆ ತರುವಂತೆ ವರ್ತಿಸಬಾರದು ತೀರ್ಪಿನಲ್ಲಿ ಉಲ್ಲೇಖಿಸಿದೆ.

ನ್ಯಾಯಾಲಯವು ಈ ಶಿಕ್ಷೆಯನ್ನು ಪ್ರಕಟಿಸಿದ ಬಳಿಕ ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ. ಇದರಿಂದಾಗಿ ನಿತೇಶ್ ರಾಣೆ ಅವರು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ಸಿಕ್ಕಿದ್ದು, ಸದ್ಯಕ್ಕೆ ಬಂಧನದಿಂದ ಪಾರಾಗಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಇತರ 29 ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ನ್ಯಾಯಾಲಯವು ಖುಲಾಸೆಗೊಳಿಸಿದೆ.

ಇದನ್ನೂ ಓದಿ:

ಏನಿದು ಪ್ರಕರಣ?
ಮುಂಬೈ-ಗೋವಾ ಹೆದ್ದಾರಿಯ ಕಂಕಾವ್ಲಿ ಭಾಗದಲ್ಲಿ ರಸ್ತೆಯ ಉದ್ದಕ್ಕೂ ದೊಡ್ಡ ಗುಂಡಿಗಳಿದ್ದವು ಮತ್ತು ಮಳೆಯಿಂದಾಗಿ ರಸ್ತೆ ಜಲಾವೃತಗೊಂಡು ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿತ್ತು. ರಸ್ತೆ ಅಗಲೀಕರಣ ಕಾಮಗಾರಿ ಅತ್ಯಂತ ಕಳಪೆಯಾಗಿ ನಡೆಯುತ್ತಿದೆ ಮತ್ತು ಸರಿಯಾಗಿ ಚರಂಡಿ ವ್ಯವಸ್ಥೆ ಮಾಡದ ಕಾರಣ ಪ್ರತಿದಿನ ಸಂಚರಿಸುತ್ತಿದ್ದ ಸಾವಿರಾರು ಜನರಿಗೆ ಸಮಸ್ಯೆಯಾಗುತ್ತಿತ್ತು. ದೂರು ನೀಡಿದ್ದರೂ ಸಮಸ್ಯೆ ಪರಿಹಾರ ಮಾಡದ್ದಕ್ಕೆ ಸಿಟ್ಟಾದ ರಾಣೆ 2019 ರಲ್ಲಿ ಅಧಿಕಾರಿಗಳಿಗೆ ಪಾಠ ಕಲಿಸಲು ಬೆಂಬಲಿಗರ ಜೊತೆ ಸೇರಿ NHAI ಎಂಜಿನಿಯರ್ ಮೇಲೆ ಕೆಸರು ಎರಚಿ ಪ್ರತಿಭಟನೆ ನಡೆಸಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

24 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago