ಉಡುಪಿ: ಥೈಲ್ಯಾಂಡ್‌ನಲ್ಲಿ ನಡೆದ ‘ಜೂನಿಯರ್ ಮಾಡೆಲ್ ಇಂಟರ್‌ನ್ಯಾಷನಲ್–2026’ ಅಂತಾರಾಷ್ಟ್ರೀಯ ಮಟ್ಟದ ಫ್ಯಾಷನ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಪ್ರಥಮ ಪ್ರಶಸ್ತಿ ಹಾಗೂ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.
ಉಡುಪಿ ಪುತ್ತೂರು ನಿವಾಸಿಗಳಾದ ಸಚಿನ್ ರಾವ್ ಹಾಗೂ ಅಶ್ವಿನಿ ರಾವ್ ದಂಪತಿ ಪುತ್ರಿಯಾಗಿರುವ ಸಚಿತ ರಾವ್, ಪ್ರಸ್ತುತ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಆಗಸ್ಟ್ 19ರಿಂದ 22ರವರೆಗೆ ಥೈಲ್ಯಾಂಡ್‌ನಲ್ಲಿ ನಡೆದ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ವಿವಿಧ ದೇಶಗಳ ಸ್ಪರ್ಧಿಗಳು ಭಾಗವಹಿಸಿದ್ದರು.
ತೀವ್ರ ಪೈಪೋಟಿಯ ನಡುವೆಯೂ ಉತ್ತಮ ಪ್ರದರ್ಶನ ನೀಡಿದ ಸಚಿತ ರಾವ್, ಅಂತಿಮವಾಗಿ ಪ್ರಥಮ ಸ್ಥಾನ ಪಡೆದು ಕಿರೀಟ ತಮ್ಮದಾಗಿಸಿಕೊಂಡಿದ್ದಾರೆ ಎಂದು ಅವರ ತಂದೆ ಸಚಿನ್ ರಾವ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಚಿತ ರಾವ್ ಈವರೆಗೆ ಎಂಟು ವಿವಿಧ ಫ್ಯಾಷನ್ ಶೋಗಳಲ್ಲಿ ಭಾಗವಹಿಸಿದ್ದು, ಎಲ್ಲಾ ಎಂಟು ಸ್ಪರ್ಧೆಗಳಲ್ಲೂ ಪ್ರಶಸ್ತಿ ಗಳಿಸಿರುವುದು ವಿಶೇಷ. ಮಗಳ ನಿರಂತರ ಪರಿಶ್ರಮ, ವೇದಿಕೆ ಮೇಲಿನ ಆತ್ಮವಿಶ್ವಾಸ ಹಾಗೂ ಕುಟುಂಬದ ಪ್ರೋತ್ಸಾಹ ಈ ಸಾಧನೆಗೆ ಕಾರಣವಾಗಿದೆ ಎಂದು ಅವರು ಹೇಳಿದರು.
ಸಚಿತ ರಾವ್ ಮಾತನಾಡಿ, ವಿದ್ಯಾಭ್ಯಾಸದ ಜತೆಗೆ ಮುಂದೆಯೂ ಫ್ಯಾಷನ್ ಸ್ಪರ್ಧೆಗಳಲ್ಲಿ ಭಾಗವಹಿಸುವ ಗುರಿ ಹೊಂದಿದ್ದೇನೆ. ಭವಿಷ್ಯದಲ್ಲಿ ‘ಮಿಸ್ ಯೂನಿವರ್ಸ್’ ಆಗಬೇಕು ಎಂಬ ಕನಸಿದೆ ಎಂದು ತಿಳಿಸಿದರು.
ಮಂಗಳೂರು: ಯಕ್ಷಗಾನದಲ್ಲಿ ಧಾರ್ಮಿಕ ಸೌಹಾರ್ದದ ಅನಾವರಣ; ಶ್ರೀದೇವಿಯ ವೇಷದಲ್ಲಿ ಕಂಗೊಳಿಸಿದ ಮುಸ್ಲಿಂ ಯುವತಿ ಮಂಗಳೂರು: ಕರಾವಳಿಯ ಗಂಡುಕಲೆ ಯಕ್ಷಗಾನದಲ್ಲಿ ಧಾರ್ಮಿಕ…
ಟೈಗರ್ ಶ್ರಾಫ್ ಕಾರಿನ ಮೇಲೆ ದಾಳಿ ಪ್ರಕರಣ : ಇಬ್ಬರು ಮಹಿಳೆಯರು ಸೇರಿ ಮತ್ತೆ ನಾಲ್ವರ ಬಂಧನ ಮುಂಬೈ: ಬಾಲಿವುಡ್…
ಬೆಂಗಳೂರು – ಮುಂಬೈ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ದಿನಾಂಕ ನಿಗದಿ ..! ಬೆಂಗಳೂರು:ಬೆಂಗಳೂರು ಮತ್ತು ಮುಂಬೈ…
ಮಂಗಳೂರು: ಬೋಳಿಯಾರ್ ಅಪಘಾತ ಪ್ರಕರಣಕ್ಕೆ ತಿರುವು ; ಪಿಕಪ್ ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಲು ಮಂಗಳೂರು: ಸೋಮವಾರ ಬೋಳಿಯಾರ್…
ಬಂಟ್ವಾಳ : ವೇಷ ಧರಿಸಿ ಸಂಗ್ರಹಿಸಿದ ಹಣದಿಂದ ಅಸ್ವಸ್ಥ ಯುವಕನಿಗೆ ನೆರವು ; ಪುಟಾಣಿಗಳ ಮಾನವೀಯ ಕಾರ್ಯಕ್ಕೆ ಭಾರೀ ಮೆಚ್ಚುಗೆ…
ಮಕ್ಕಳ ಕೈಗೆ ಮೋಟಾರು ವಾಹನಗಳನ್ನು ನೀಡುವುದಕ್ಕೆ ಅದು ಆಟಿಕೆಯಲ್ಲ , ಸಾರ್ವಜನಿಕ ರಸ್ತೆಗಳು ಆಟದ ಮೈದಾನವಲ್ಲ : ಕರ್ನಾಟಕ ಹೈಕೋರ್ಟ್…