ಬೆಂಗಳೂರು : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯೇ ಪ್ರಧಾನಿ ಆಗಬೇಕು ಎಂದು ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಪ್ರಧಾನಿ ಅಭ್ಯರ್ಥಿ ರೇಸ್‌ನಿಂದ ರಾಹುಲ್ ಗಾಂಧಿ ಹಿಂದೆ ಸರಿದ ವಿಚಾರದ ಬಗ್ಗೆ ಮಾತನಾಡಿರುವ ಅವರು, ರಾಹುಲ್ ಗಾಂಧಿ ಪ್ರಧಾನಿ ಆಗುವುದರ ಬಗ್ಗೆ ನಮ್ಮ ಪಕ್ಷ ತೀರ್ಮಾನ ಮಾಡುತ್ತದೆ. ದೇಶದ ಹಿತದೃಷ್ಟಿಯಿಂದ ಆ ಮನೆತನ ಯಾವಾಗಲೂ ತ್ಯಾಗ ಮಾಡುತ್ತಾ ಬಂದಿದೆ ಎಂದರು. ಬಿಜೆಪಿ ಸೋಲಿಸುವ ಸಲುವಾಗಿ ಎಲ್ಲರೂ ಒಂದಾಗಬೇಕು ಅಂತ ಹೇಳಿದ್ದಾರೆ. ಪ್ರಧಾನಿ ಅಭ್ಯರ್ಥಿ ರೇಸ್‌ನಿಂದ ರಾಹುಲ್ ಗಾಂಧಿ ಹಿಂದೆ ಸರಿದಿರಬಹುದು. ಆದ್ರೆ, ಅವರು ನಮ್ಮ ನಾಯಕರು ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಿತ್ರ ಪಕ್ಷಕ್ಕೆ ಪ್ರಧಾನಿ ಸ್ಥಾನವನ್ನು ರಾಹುಲ್ ಗಾಂಧಿ ಬಿಟ್ಟುಕೊಟ್ಟಿರಬಹುದು. ಆದ್ರೆ ರಾಹುಲ್ ಗಾಂಧಿ ಅವರೇ ನಮ್ಮ ನಾಯಕರು. ಅವರೇ ಕಾಂಗ್ರೆಸ್ ಮುಂದಿನ ಪ್ರಧಾನಿ ಆಗ್ಬೇಕು. ಯುಪಿಎ ಸರ್ಕಾರ ಇದ್ದಾಗಲೇ ಪಿಎಂ ಆಗಬಹುದಿತ್ತು. ಆದ್ರೆ ಸೋನಿಯಾ ಮತ್ತು ರಾಹುಲ್ ಗಾಂಧಿ ಇಬ್ಬರು ತ್ಯಾಗ ಮಾಡಿದ್ದಾರೆ. ಚುನಾವಣೆ ಗೆಲ್ಲುವುದೇ ನಮ್ಮ ಗುರಿ ಎಂದು ತಿಳಿಸಿದರು..
ಸೋನಿಯಾ ಗಾಂಧಿ ಅವರು ಯಾವತ್ತೋ ಪ್ರಧಾನಿ ಅಗಬಹುದಿತ್ತು. ರಾಹುಲ್ ಗಾಂಧಿಯವರೂ ಪ್ರಧಾನಿಯಾಗಬೇಕಿತ್ತು. ಆದರೆ ವ್ಯಕ್ತಿಗಿಂತ ದೇಶ ಮುಖ್ಯ ಎನ್ನುವುದನ್ನು ರಾಹುಲ್ ಪ್ರತಿಪಾದನೆ ಮಾಡುತ್ತಾ ಬಂದಿದ್ದಾರೆ. ರಾಷ್ಟ್ರಧ್ವಜ ನನ್ನ ಧರ್ಮ ಎಂದು ಹೇಳಿದವರು ರಾಹುಲ್ ಗಾಂಧಿ, ಈ ಹಿನ್ನೆಲೆಯಲ್ಲಿ ಅವರು ನಾನು ಪ್ರಧಾನಿಯಾಗಬೇಕೆಂದು ಎಲ್ಲೂ ಹೇಳಿಕೆ ನೀಡಿಲ್ಲ ಎಂದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…