ನವದೆಹಲಿ: ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಹುದ್ದೆಯಿಂದ ಮಾಜಿ ಸಂಸದೆ ರಮ್ಯಾಗೆ ‘ಅಧಿಕೃತ’ವಾಗಿ ಗೇಟ್ ಪಾಸ್ ನೀಡಲಾಗಿದ್ದು, ಅವರ ಸ್ಥಾನಕ್ಕೆ ರಾಷ್ಟ್ರೀಯ ಮಾಧ್ಯಮ ಸಂಯೋಜಕರಾಗಿರುವ ರೋಹನ್ ಗುಪ್ತಾ ಅವರನ್ನು ನೇಮಕ ಮಾಡಲಾಗಿದೆ.
ಲೋಕಸಭಾ ಚುನಾವಣೆಯ ಪಕ್ಷ ಹೀನಾಯವಾಗಿ ಸೋತ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದ ಜವಾಬ್ದಾರಿ ನೀಡಲು ಕಾಂಗ್ರೆಸ್ ಹೈಕಮಾಂಡ್ ಹೊಸ ತಂಡಕ್ಕೆ ಮಣೆ ಹಾಕಿದೆ. ಈ ಸಂಬಂಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ರೋಹನ್ ಗುಪ್ತಾ ಅವರನ್ನು ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥರನ್ನಾಗಿ ಮಾಡಲಾಗಿದೆ ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ತಿಳಿಸಿದ್ದಾರೆ.
ರಾಷ್ಟ್ರೀಯ ಮಾಧ್ಯಮ ಸಂಯೋಜಕರಾಗಿರುವ ರೋಹನ್ ಗುಪ್ತಾ ಗುಜರಾತಿನ ಅಹಮದಾಬಾದ್ ನವರಾಗಿದ್ದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ರಾಜಕೀಯ ಉತ್ಸಾಹಿ, ಉದ್ಯಮಿ, ಪ್ರೇರಕ, ತಂದೆ, ಟ್ವೀಟ್‍ಗಳು ಕಟ್ಟುನಿಟ್ಟಾಗಿ ವೈಯಕ್ತಿಕವಾಗಿವೆ ಎಂದು ಬರೆದುಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅಲೆಯಿಂದಾಗಿ 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಇದರಿಂದಾಗಿ ಎಚ್ಚೆತ್ತುಕೊಂಡ ಕಾಂಗ್ರೆಸ್ ಈಗ ಪಕ್ಷದ ಸಾಮಾಜಿಕ ಜಾಲತಾಣ ತಂಡವನ್ನು ಬಲಪಡಿಸಲು ಭರ್ಜರಿ ಸಿದ್ಧತೆ ನಡೆಸಿದೆ. ಈ ನಿಟ್ಟಿನಲ್ಲಿ ಮಾಜಿ ಸಂಸದೆ ರಮ್ಯಾ ಅವರನ್ನು ಅಧಿಕೃತವಾಗಿ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ಸ್ಥಾನದಿಂದ ಕೈಬಿಡಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…