Featured

ಎಕೆಎಂಎಸ್ ಬಸ್ ಮಾಲಕ ಕೊಲೆ ಪ್ರಕರಣ: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಅಕ್ರಂಗೆ ಲುಕ್‌ಔಟ್ ನೋಟೀಸ್ – vishwanews24

ಎಕೆಎಂಎಸ್ ಬಸ್ ಮಾಲಕ ಕೊಲೆ ಪ್ರಕರಣ: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಅಕ್ರಂಗೆ ಲುಕ್‌ಔಟ್ ನೋಟೀಸ್

ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಎಂಬಲ್ಲಿ ಸೆ.27ರಂದು ನಡೆದ ಎಕೆಎಂಎಸ್ ಬಸ್ ಮಾಲಕ ಸೈಫ್ ಯಾನೆ ಸೈಯಿಪುದ್ದಿನ್ ಆತ್ರಾಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಅಕ್ರಂ ವಿರುದ್ಧ ಲುಕ್‌ಔಟ್ ನೋಟೀಸ್ ಜಾರಿ ಮಾಡಲಾಗಿದೆ.

2016ರ ಜು.14ರಂದು ಆತ್ರಾಡಿ ಸಮೀಪದ ಶೇಡಿಗುಡ್ಡೆ ಎಂಬಲ್ಲಿ ನಡೆದ ಕೆಮ್ಮಣ್ಣುವಿನ ಶೇಖ್ ಮಹಮ್ಮದ್ ತಸ್ಲೀಮ್ ಕೊಲೆ ಪ್ರಕರಣದಲ್ಲಿ ಸೈಫ್ ಜೊತೆ ಅಕ್ರಂ ಕೂಡ ಆರೋಪಿಯಾಗಿದ್ದನು. ಆ ಬಳಿಕ ವ್ಯವಾಹರದಲ್ಲಿ ಇವರಿಬ್ಬರು ಜೊತೆಯಾಗಿದ್ದರು.

ಸೈಫ್ ಕೊಲೆಗೆ ಒಂದು ವಾರ ಮೊದಲು ಅಕ್ರಂ, ಕೊಲೆಗೆ ಸಂಬಂಧಿಸಿ ಎಲ್ಲ ರೀತಿಯ ಸಂಚು ರೂಪಿಸಿ, ದುಬೈಗೆ ಪರಾರಿಯಾಗಿದ್ದನು. ಇದೇ ವೇಳೆ ಅಕ್ರಂ, ವ್ಯವಹಾರಕ್ಕೆ ಸಂಬಂಧಿಸಿ ಸಾಲಗಳನ್ನು ಸೈಫ್ ಮತ್ತು ಸೈಫ್‌ನ ಪತ್ನಿ ಹೆಸರಿಗೆ ಹಾಗೂ ಲಾಭದ ವ್ಯವಹಾರವನ್ನು ತನ್ನ ಪಾಲಿಗೆ ಮಾಡಿದ್ದನು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದೀಗ ಸೈಫ್ ಕೊಲೆಗೆ ಸಂಚು ರೂಪಿಸಿ ವಿದೇಶದಲ್ಲಿ ತಲೆಮರೆಸಿ ಕೊಂಡಿರುವ ಅಕ್ರಂ ಬಂಧನಕ್ಕೆ ಉಡುಪಿ ಪೊಲೀಸರು ಕ್ರಮ ಜರಗಿಸಿದ್ದು, ಇಂಟರ್ ಪೋಲ್ ಸಹಾಯದಿಂದ ಆತನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago