ಎಲ್ಲಾರು ಮಾಡುವುದು ಅಧಿಕಾರಕ್ಕಾಗಿ. ಒಂದು ಸಿನೆಮಾ ಪ್ಲಾಫ್ ಮಾಡಲು 25 ಸಿನೆಮಾ ಬಿಡುತ್ತಾರೆ. ರಾಜಕೀಯವೂ ಹಾಗೆಯೇ. ಕುಮಾರಸ್ವಾಮಿ ಐದು ವರ್ಷ ಅಧಿಕಾರ ಮಾಡಲು ಖಂಡಿತ ಕಾಂಗ್ರೆಸ್ ಬಿಡಲ್ಲ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಮತ್ತು ನಟ ಜಗ್ಗೇಶ್ ತಿಳಿಸಿದ್ದಾರೆ.
ಬಿಎಸ್‌ವೈ ನಿವಾಸದ ಮುಂದೆ ಸುದ್ದಿಗಾರರೊಂದಿಗೆ ಮಾತನಾಡಿ, ಆಗಲೇ ಸಣ್ಣದಾಗಿ ಒಳಜಗಳ ಶುರುವಾಗಿದೆ. ವೇಣುಗೋಪಾಲ್ ಹೇಳಿಕೆಯನ್ನು ಎಲ್ಲರೂ ಗಮನಿಸಿರಬಹುದು. ಮುಂದಿನ ದಿನಗಳಲ್ಲಿ ಏನಾಗಬಹುದು ಎಂದು ಕಾದು ನೋಡಿ. ಮೈತ್ರಿ ಸರ್ಕಾರ ಎನ್ನುವುದಕ್ಕಿಂತ ಅಪವಿತ್ರ ಮೈತ್ರಿ ಎನ್ನುತ್ತೇನೆ. ಜನ ಸಿಂಗಲ್ ಲಾರ್ಜೆಸ್ಟ್ ಪಾರ್ಟಿಯನ್ನಾಗಿ ಮಾಡಿದ್ದರೂ ಮೈತ್ರಿ ಮಾಡಿಕೊಂಡಿದ್ದಾರೆ ಎಂದರು.
ನಾನು ಪ್ರಾಮಾಣಿಕವಾಗಿ ಹೇಳುತ್ತಿದ್ದೀನಿ. ನಾನು ಸ್ಪರ್ಧಿಸಿದಾಗ ಒಂದು ಪೈಸೆ ಹಂಚಿಲ್ಲ. ಆದರೆ, ಕಾಂಗ್ರೆಸ್ ನವವರು ಪ್ರತಿ ವೋಟಿಗೆ ಐದುನೂರು ಸಾವಿರ ರೂಪಾಯಿ ಹಂಚಿ ಗೆದ್ದಿದ್ದಾರೆ. ಸಿದ್ದರಾಮಯ್ಯ ಕೂಡ ಜನತಾದಳದಿಂದ ಬಂದವರೇ ಅಲ್ಲವೇ? ಹಾಗಾಗಿ ಅವರು ದೇವೇಗೌಡರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಸರ್ಕಾರ ರಚನೆಗೆ ಮುಂದಾಗಿದ್ದಾರೆ. ಹಾಗಾಗಿ ಈ ಸರ್ಕಾರ ಹೆಚ್ಚು ದಿನ ಉಳಿಯಲ್ಲ ಎಂದು ಹೇಳಿದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…