ಉಡುಪಿ

ಎಚ್‌ಡಿಡಿ ಜೊತೆ ಕೈ ಜೋಡಿಸಿದ ಸಿದ್ದರಾಮಯ್ಯ ; ನಾವೆಲ್ಲಾ ಒಂದಾಗಿ ಕೋಮುವಾದಿ ಬಿಜೆಪಿ ಸೋಲಿಸುವುದೇ ಗುರಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತದ್ವಿರುದ್ಧ ದಿಕ್ಕಿನಲ್ಲಿದ್ದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು 12 ವರ್ಷಗಳ ನಂತರ ಜಂಟಿ ಸುದ್ದಿಗೋಷ್ಠಿ  ನಡೆಸಿ ಒಂದೇ ವೇದಿಕೆಗೆ ಬರುವ ಮೂಲಕ ರಾಜಕೀಯ ರಂಗದಲ್ಲಿ ಸಂಚಲನ ಮೂಡಿಸಿದ್ದಾರೆ.

ಮುಂದಿನ ಲೋಕಸಭೆ ಚುನಾವಣೆಯನ್ನು ಗಮನವಿಟ್ಟುಕೊಂಡು ನಾವೆಲ್ಲಾ ಹಳೆಯದನ್ನು ಮರೆತು ಒಂದಾಗಿದ್ದೇವೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಹೇಳಿದ್ದಾರೆ.

ನಮಗೆ  ರಾಜ್ಯದ ಅಭಿವೃದ್ಧಿ ಮುಖ್ಯ, ಹಳೆಯದನ್ನು ಮರೆತು ಬಿಡಿ ಎಂದ ದೇವೇಗೌಡರು ನಮ್ಮದು ತಪ್ಪಾಗಿದ್ದರೆ ಕ್ಷಮಿಸಿ ಬಿಡಿ ಎಂದು ಅಚ್ಚರಿ ಮೂಡಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ  ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ , ಮೋದಿ ಪ್ರಧಾನಿ ಆದ ಮೇಲೆ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದೆ. ಜನಸಾಮಾನ್ಯರಿಗೆ ನೀಡಿದ ಭರವಸೆಗಳು ಹುಸಿಯಾಗಿದೆ. ಜನಸಾಮಾನ್ಯರ ಬದುಕು, ರೈತರ ಬದುಕು ದುಸ್ಥರವಾಗಿದೆ. ಜನರ ಕಷ್ಟಗಳನ್ನು ಆಲಿಸುವ ಕೆಲಸವನ್ನು ಮೋದಿ ಮಾಡಿಲ್ಲ ಎಂದರು.

ನಾವು ಕಾಯಾ, ವಾಚಾ, ಮನಸಾ ಕೆಲಸ ಮಾಡುತ್ತಿದ್ದೇವೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ  28 ಕ್ಕೆ 28 ಸ್ಥಾನಗಳನ್ನೂ ಹೊಂದಾಣಿಕೆಯಿಂದ ಗೆಲ್ಲಬೇಕು ಎನ್ನುವುದು ನಮ್ಮ ಉದ್ದೇಶ ಎಂದರು.

ಸುದ್ದಿಗೋಷ್ಠಿಯಲ್ಲಿ ಸಚಿವರಾದ ಡಿ.ಕೆ.ಶಿವಕುಮಾರ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಡಿಸಿಎಂ ಡಾ.ಜಿ.ಪರಮೇಶ್ವರ್‌ ಮೊದಲಾದವರು ಹಾಜರಿದ್ದರು.

 

Vishwa News 24

Recent Posts

ರನ್‌ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು : ತಪ್ಪಿದ ಭಾರೀ ದುರಂತ – vishwanews24

ರನ್‌ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು : ತಪ್ಪಿದ ಭಾರೀ ದುರಂತ ಅಹಮದಾಬಾದ್,: ಗುಜರಾತ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್…

11 minutes ago

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು – vishwanews24

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…

20 minutes ago

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಮತ್ತೆ ಆರಂಭ ; ಗುರುತಿನ ಚೀಟಿ, ಶುಲ್ಕ ಕಡ್ಡಾಯ – vishwanews24

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್‌ಸೈಟ್‌ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…

28 minutes ago

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ – vishwanews24

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…

50 minutes ago

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

19 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

19 hours ago