ಉಡುಪಿ: “ಎಚ್.ಡಿ.ದೇವೇಗೌಡ ಅವರು ಪ್ರಧಾನಿಯಾಗಿ ಮುಂದುವರಿದಿದ್ದರೆ ಕಾಶ್ಮೀರ ಸಮಸ್ಯೆ ಕೂಡ ಬಗೆಹರಿಯುತ್ತಿತ್ತು’ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ದೇವೇಗೌಡ ದಂಪತಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಅನಂತರ ಉಡುಪಿ ಗೋವಿಂದ ಕಲ್ಯಾಣಮಂಟಪದಲ್ಲಿ ಜನ್ಮನಕ್ಷತ್ರ ಸಮಾರಂಭದಲ್ಲಿ ಪಾಲ್ಗೊಂಡ ಸಂದರ್ಭ ಪೇಜಾವರ ಶ್ರೀಗಳು ಆಶೀರ್ವಚನ ನೀಡಿದರು.
“ದೇವೇಗೌಡ ಅವರು ಹಲವು ಸಮಸ್ಯೆಗಳನ್ನು ಪರಿಹರಿಸಿದ್ದಾರೆ. ಅವರು ರಾಜ್ಯದ ಪ್ರಾಮಾಣಿಕ, ಹೆಮ್ಮೆಯ ರಾಜಕಾರಣಿ. ಅವರು ಪ್ರಧಾನಿಯಾಗಿದ್ದಾಗ ಹೊಸದಿಲ್ಲಿಯಲ್ಲಿ ಮಠಕ್ಕೆಂದು ಒಂದು ಎಕರೆ ಜಾಗವನ್ನು ಕಡಿಮೆ ಬೆಲೆಗೆ ನೀಡಿದ್ದರು. ಅದರಲ್ಲಿ ಮಠ ಆಗಿದೆ. ಜುಲೈನಲ್ಲಿ ಸಂಶೋಧನಾ ಕೇಂದ್ರ ಆರಂಭಗೊಳ್ಳಲಿದೆ’ ಎಂದು ಶ್ರೀಗಳು ಹೇಳಿದರು. ದಂಪತಿಗೆ ಶ್ರೀಕೃಷ್ಣ ಪೂರ್ಣ ಅನುಗ್ರಹ ನೀಡಲಿ ಎಂದು ಹರಸಿದರು.
ಉಡುಪಿ ಶ್ರೀ ಗೋವಿಂದ ಕಲ್ಯಾಣಮಂಟಪದಲ್ಲಿ ವಿಶ್ವೇಶತೀರ್ಥ ಶ್ರೀಪಾದರ ಜನ್ಮ ನಕ್ಷತ್ರ ಸಮಾರಂಭದ ಪ್ರಯುಕ್ತ ಪೂಜೆಯಲ್ಲಿ ಪಾಲ್ಗೊಂಡ ದೇವೇಗೌಡ ದಂಪತಿ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಶ್ರೀಗಳು ಶಾಲು, ಹಾರ ಹಾಕಿ ಆಶೀರ್ವಚಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…