ತುಮಕೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಎರಡು ನಾಲಗೆಯ ಸಿಎಂ ಎಂದು ಕಾಂಗ್ರೆಸ್ ಮಾಜಿ ಶಾಸಕ ಹಾಗು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಅಸಮಾಧಾನ ಹೊರ ಹಾಕಿದ್ದಾರೆ.
ಜಿಲ್ಲೆಯ ಮಧುಗಿರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಕುಮಾರಸ್ವಾಮಿ ಹೇಳುವುದು ಒಂದು ಮಾಡುವುದು ಇನ್ನೊಂದು. ಮೊದಲಿಗೆ ರೈತರ ಸಂಪೂರ್ಣ ಸಾಲಮನ್ನಾ ಎಂದು ಹೇಳಿದರು. ಈಗ ರೈತರ ಸಾಲಮನ್ನಾ ಎನ್ನುವುದು ಕನ್ನಡಿಯೊಳಗಿನ ಕಗ್ಗಾಂಟಾಗಿದೆ. ಸಾಲಮನ್ನಾವು ದೊಡ್ಡ ದೊಡ್ಡ ಎಸ್ಟೇಟ್ ಹೊಂದಿರುವ ಉದ್ಯಮಿಗಳಿಗೆ ವರದಾನವಾಗಲಿದೆ ಎಂದು ವ್ಯಂಗ್ಯ ಮಾಡಿದರು.
ಬಜೆಟ್‍ನಲ್ಲಿ ತುಮಕೂರು ಜಿಲ್ಲೆಯನ್ನು ಕಡೆಗಣಿಸಲಾಗಿದ್ದು, ಈ ಹಿಂದೆ ಜಿಲ್ಲೆಯ ವೈದ್ಯಕೀಯ ಕಾಲೇಜು ಮಂಜೂರಾಗಿತ್ತು. ಆದ್ರೆ ಸಿಎಂ ಈ ಬಾರಿ ಬಜೆಟ್ ನಲ್ಲಿ ಕಾಲೇಜಿನ ಬಗ್ಗೆ ಪ್ರಸ್ತಾಪಿಸದೇ ಮೋಸ ಮಾಡಿದ್ದಾರೆ. ಹಿಂದಿನ ಕಾಂಗ್ರೆಸ್ ಸರ್ಕಾರ ಕೆಲ ಯೋಜನೆಗೆ ಕತ್ತರಿ ಹಾಕಿದ್ದು, ಅನ್ನ ಭಾಗ್ಯ ಯೋಜನೆಯಲ್ಲಿ 2 ಕೆ.ಜಿ. ಅಕ್ಕಿಯನ್ನು ಕಡಿಮೆ ಮಾಡುವ ಮೂಲಕ ಬಡವರ ಹೊಟ್ಟೆ ಮೇಲೆ ಹೊಡೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ಜಿಲ್ಲೆಗೆ ಹಿಂದಿನ ಸರ್ಕಾರ ಮಂಜೂರು ಮಾಡಿದ್ದ ಯೋಜನೆಗಳನ್ನು ಎಚ್‍ಡಿಕೆ ಮುಂದುವರಿಸುತ್ತಿಲ್ಲ. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಲ್ಲೂ ಮೋಸ ಮಾಡಲಾಗಿದೆ. ಡೀಸೆಲ್, ಪೆಟ್ರೋಲ್ ಮತ್ತು ವಿದ್ಯುತ್ ದರ ಹೆಚ್ಚಿಸಿ ಜನಸಾಮಾನ್ಯರ ಮೇಲೆ ಹೊರೆ ಹೇರಿದ್ದಾರೆ ಎಂದು ಬಜೆಟ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…