Featured

ಎಚ್ ಐ ವಿ ಸೋಂಕಿತರಿಗೆ 5 ಲಕ್ಷ ರೂ ವರೆಗೆ ಉಚಿತ ಔಷಧಿ – ಸಚಿವ ಡಾ.ಕೆ.ಸುಧಾಕರ್ -Vishwanews24

ಎಚ್ ಐ ವಿ ಸೋಂಕಿತರಿಗೆ 5 ಲಕ್ಷ ರೂ ವರೆಗೆ ಉಚಿತ ಔಷಧಿ – ಸಚಿವ ಡಾ.ಕೆ.ಸುಧಾಕರ್ -Vishwanews24

ಬೆಂಗಳೂರು : ಮುನ್ನೆಚ್ಚರಿಕೆ ಕ್ರಮ, ಜಾಗೃತಿ ಕಾರ್ಯಕ್ರಮಗಳ ಮೂಲಕ ಎಚ್‍ಐವಿ ಸೋಂಕು ಹರಡುವುದನ್ನು ತಡೆಗಟ್ಟಬೇಕು. ಎಚ್‍ಐವಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಅನುದಾನ ನೀಡಲಾಗುತ್ತಿದೆ. ಅವರಿಗೆ ವಾರ್ಷಿಕ 5 ಲಕ್ಷ ರೂ.ವರೆಗೆ ಉಚಿತ ಔಷಧಿ ನೀಡಬೇಕು ಎಂದು ಆರೋಗ್ಯ ಕೇಂದ್ರಗಳಿಗೆ ಸೂಚಿಸಲಾಗಿದೆ. ಎಪಿಎಲ್ ಹಾಗೂ ಬಿಪಿಎಲ್ ರೋಗಿಗಳಿಗೆ ಇದು ಅನ್ವಯವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ನಡೆದ ವಿಶ್ವ ಏಡ್ಸ್ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾಗತಿಕ ಒಗ್ಗಟ್ಟು, ಜವಾಬ್ದಾರಿಯ ಹಂಚಿಕೆಯೊಂದಿಗೆ ಏಡ್ಸ್ ನಿಯಂತ್ರಣಕ್ಕೆ ತರಬೇಕು ಎಂದು ಈ ಬಾರಿ ಘೋಷಿಸಲಾಗಿದೆ. ಎಚ್ ಐವಿಗೊಳಗಾದವರು ಮಾನಸಿಕ ಖಿನ್ನತೆಗೆ ಒಳಗಾಗಿರುತ್ತಾರೆ. ಕೋವಿಡ್ ಬಂದಾಗ, ‘ರೋಗದ ವಿರುದ್ಧ ಹೋರಾಡಬೇಕೆ ಹೊರತು ರೋಗಿಯ ವಿರುದ್ಧ ಅಲ್ಲ’ ಎಂಬ ಸಂದೇಶ ನೀಡಲಾಯಿತು. ಈ ಸಂದೇಶ ಎಲ್ಲ ರೋಗಗಳಿಗೂ ಅನ್ವಯವಾಗುತ್ತದೆ. ಏಡ್ಸ್ ರೋಗಿಗಳನ್ನು ಅವಮಾನಕಾರಿಯಾಗಿ ನೋಡಬಾರದು ಎಂದರು.

ಉತ್ತಮ ಆರೋಗ್ಯ ಸೌಲಭ್ಯಗಳು ಇರುವುದರಿಂದ ಏಡ್ಸ್ ಪ್ರಕರಣಗಳಲ್ಲಿ ಸಾವಿನ ಪ್ರಮಾಣ ಕಡಿಮೆಯಾಗಿದೆ. 99 ವರ್ಷದ ಎಚ್ ಐವಿ ಸೋಂಕಿತರು ಕೂಡ ಜೀವಂತವಾಗಿ ಆರೋಗ್ಯದಿಂದಿದ್ದಾರೆ. ಆ ಮಟ್ಟಿಗೆ ಆರೋಗ್ಯ ಸೌಲಭ್ಯಗಳಿವೆ. ಪ್ರಧಾನಿ ನರೇಂದ್ರ ಮೋದಿಯವರು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ಮೂಲಕ ಉಚಿತ ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸಿದ್ದಾರೆ ಎಂದರು.

ಎಚ್ ಐವಿ ಸೋಂಕಿತರಿಗೆ ಕೋವಿಡ್ ಕೂಡ ಬಂದರೆ ಕಷ್ಟ ಎಂದು ಮೊದಲಿಗೆ ಭಯವಾಗಿತ್ತು. ರಾಜ್ಯದಲ್ಲಿ 280 ಎಚ್ ಐವಿ ಸೋಂಕಿತರು ಕೋವಿಡ್ ಸೋಂಕಿಗೆ ಒಳಗಾಗಿದ್ದರು. ಈ ಪೈಕಿ 275 ಮಂದಿ ಜೀವಂತವಾಗಿದ್ದು, ಅವರ ಆರೋಗ್ಯ ಸುರಕ್ಷಿತವಾಗಿದೆ ಎಂದರು.

ಎಚ್‍ಐವಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಅನುದಾನ ನೀಡಲಾಗುತ್ತಿದೆ. ಅವರಿಗೆ ವಾರ್ಷಿಕ 5 ಲಕ್ಷ ರೂ.ವರೆಗೆ ಉಚಿತ ಔಷಧಿ ನೀಡಬೇಕು ಎಂದು ಆರೋಗ್ಯ ಕೇಂದ್ರಗಳಿಗೆ ಸೂಚಿಸಲಾಗಿದೆ. ಎಪಿಎಲ್ ಹಾಗೂ ಬಿಪಿಎಲ್ ರೋಗಿಗಳಿಗೆ ಇದು ಅನ್ವಯವಾಗಲಿದೆ ಎಂದು ತಿಳಿಸಿದರು.

 

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

17 minutes ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

2 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

2 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

2 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

3 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

3 hours ago