ಬೆಂಗಳೂರು : ಮುನ್ನೆಚ್ಚರಿಕೆ ಕ್ರಮ, ಜಾಗೃತಿ ಕಾರ್ಯಕ್ರಮಗಳ ಮೂಲಕ ಎಚ್‍ಐವಿ ಸೋಂಕು ಹರಡುವುದನ್ನು ತಡೆಗಟ್ಟಬೇಕು. ಎಚ್‍ಐವಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಅನುದಾನ ನೀಡಲಾಗುತ್ತಿದೆ. ಅವರಿಗೆ ವಾರ್ಷಿಕ 5 ಲಕ್ಷ ರೂ.ವರೆಗೆ ಉಚಿತ ಔಷಧಿ ನೀಡಬೇಕು ಎಂದು ಆರೋಗ್ಯ ಕೇಂದ್ರಗಳಿಗೆ ಸೂಚಿಸಲಾಗಿದೆ. ಎಪಿಎಲ್ ಹಾಗೂ ಬಿಪಿಎಲ್ ರೋಗಿಗಳಿಗೆ ಇದು ಅನ್ವಯವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ನಡೆದ ವಿಶ್ವ ಏಡ್ಸ್ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾಗತಿಕ ಒಗ್ಗಟ್ಟು, ಜವಾಬ್ದಾರಿಯ ಹಂಚಿಕೆಯೊಂದಿಗೆ ಏಡ್ಸ್ ನಿಯಂತ್ರಣಕ್ಕೆ ತರಬೇಕು ಎಂದು ಈ ಬಾರಿ ಘೋಷಿಸಲಾಗಿದೆ. ಎಚ್ ಐವಿಗೊಳಗಾದವರು ಮಾನಸಿಕ ಖಿನ್ನತೆಗೆ ಒಳಗಾಗಿರುತ್ತಾರೆ. ಕೋವಿಡ್ ಬಂದಾಗ, ‘ರೋಗದ ವಿರುದ್ಧ ಹೋರಾಡಬೇಕೆ ಹೊರತು ರೋಗಿಯ ವಿರುದ್ಧ ಅಲ್ಲ’ ಎಂಬ ಸಂದೇಶ ನೀಡಲಾಯಿತು. ಈ ಸಂದೇಶ ಎಲ್ಲ ರೋಗಗಳಿಗೂ ಅನ್ವಯವಾಗುತ್ತದೆ. ಏಡ್ಸ್ ರೋಗಿಗಳನ್ನು ಅವಮಾನಕಾರಿಯಾಗಿ ನೋಡಬಾರದು ಎಂದರು.
ಉತ್ತಮ ಆರೋಗ್ಯ ಸೌಲಭ್ಯಗಳು ಇರುವುದರಿಂದ ಏಡ್ಸ್ ಪ್ರಕರಣಗಳಲ್ಲಿ ಸಾವಿನ ಪ್ರಮಾಣ ಕಡಿಮೆಯಾಗಿದೆ. 99 ವರ್ಷದ ಎಚ್ ಐವಿ ಸೋಂಕಿತರು ಕೂಡ ಜೀವಂತವಾಗಿ ಆರೋಗ್ಯದಿಂದಿದ್ದಾರೆ. ಆ ಮಟ್ಟಿಗೆ ಆರೋಗ್ಯ ಸೌಲಭ್ಯಗಳಿವೆ. ಪ್ರಧಾನಿ ನರೇಂದ್ರ ಮೋದಿಯವರು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ಮೂಲಕ ಉಚಿತ ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸಿದ್ದಾರೆ ಎಂದರು.
ಎಚ್ ಐವಿ ಸೋಂಕಿತರಿಗೆ ಕೋವಿಡ್ ಕೂಡ ಬಂದರೆ ಕಷ್ಟ ಎಂದು ಮೊದಲಿಗೆ ಭಯವಾಗಿತ್ತು. ರಾಜ್ಯದಲ್ಲಿ 280 ಎಚ್ ಐವಿ ಸೋಂಕಿತರು ಕೋವಿಡ್ ಸೋಂಕಿಗೆ ಒಳಗಾಗಿದ್ದರು. ಈ ಪೈಕಿ 275 ಮಂದಿ ಜೀವಂತವಾಗಿದ್ದು, ಅವರ ಆರೋಗ್ಯ ಸುರಕ್ಷಿತವಾಗಿದೆ ಎಂದರು.
ಎಚ್‍ಐವಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಅನುದಾನ ನೀಡಲಾಗುತ್ತಿದೆ. ಅವರಿಗೆ ವಾರ್ಷಿಕ 5 ಲಕ್ಷ ರೂ.ವರೆಗೆ ಉಚಿತ ಔಷಧಿ ನೀಡಬೇಕು ಎಂದು ಆರೋಗ್ಯ ಕೇಂದ್ರಗಳಿಗೆ ಸೂಚಿಸಲಾಗಿದೆ. ಎಪಿಎಲ್ ಹಾಗೂ ಬಿಪಿಎಲ್ ರೋಗಿಗಳಿಗೆ ಇದು ಅನ್ವಯವಾಗಲಿದೆ ಎಂದು ತಿಳಿಸಿದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…