ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಭೇಟಿಯಾಗಿದ್ದಾರೆ.
ಮೊದಲು ಆರ್.ಟಿ.ನಗರದಲ್ಲಿರುವ ಬಸವರಾಜ ಬೊಮ್ಮಾಯಿ ನಿವಾಸದಲ್ಲಿ ಬೊಮ್ಮಾಯಿಯವರನ್ನು ಭೇಟಿ ಮಾಡಿದ ವಿಜಯೇಂದ್ರ, ಬಳಿಕ ಪದ್ಮನಾಭನಗರದಲ್ಲಿರುವ ಎಚ್.ಡಿ.ದೇವೇಗೌಡರ ನಿವಾಸದಲ್ಲಿ ಮಾಜಿ ಪ್ರಧಾನಿಗಳನ್ನು ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಶಾಸಕ ಎಂ.ಕೃಷ್ಣಪ್ಪ, ಸಿ.ಕೆ.ರಾಮಮೂರ್ತಿ, ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಶಾಸಕ ಡಿ.ಸಿ.ತಮ್ಮಣ್ಣನವರು ಉಪಸ್ಥಿತರಿದ್ದರು.
ಇನ್ನು ”ಕರುನಾಡಿನ ಹೆಮ್ಮೆ, ಗೌರವಾನ್ವಿತ ಮಾಜಿ ಪ್ರಧಾನಿ ಶ್ರೀ ಹೆಚ್.ಡಿ. ದೇವೇಗೌಡರನ್ನು ಅವರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆಯಲಾಯಿತು. ಈ ವೇಳೆ ಅವರು ಪ್ರೀತಿಯಿಂದ ಸನ್ಮಾನಿಸಿ ಶುಭ ಹಾರೈಸಿದ್ದು ನನ್ನ ರಾಜಕೀಯ ಜೀವನದ ಅವಿಸ್ಮರಣಿಯ ಕ್ಷಣವಾಗಿಸಿತು. ಈ ಹೊತ್ತಿಗೂ ಸ್ಫೂರ್ತಿಯ ಚಿಲುಮೆ ಯಾಗಿರುವ ಅವರ ‘ಹೋರಾಟದ ಛಲ – ಆತ್ಮಸ್ಥೈರ್ಯದ ಬಲ’ ನನ್ನಂಥವರಿಗೆ ಸದಾ ಪ್ರೇರಣಾ ಶಕ್ತಿಯಾಗಿದೆ” ಎಂದು ದೇವೇಗೌಡರ ಭೇಟಿ ಬಗ್ಗೆ ವಿಜಯೇಂದ್ರ ಅವರು ಟ್ವಟರ್ ನಲ್ಲಿ ಬರೆದುಕೊಂಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…