Featured

ಎಚ್.ಡಿ. ದೇವೇಗೌಡರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ BJP ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ – vishwanews24

ಎಚ್.ಡಿ. ದೇವೇಗೌಡರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ BJP ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಭೇಟಿಯಾಗಿದ್ದಾರೆ.

ಮೊದಲು ಆರ್.ಟಿ.‌ನಗರದಲ್ಲಿರುವ ಬಸವರಾಜ ಬೊಮ್ಮಾಯಿ ನಿವಾಸದಲ್ಲಿ ಬೊಮ್ಮಾಯಿಯವರನ್ನು ಭೇಟಿ ಮಾಡಿದ ವಿಜಯೇಂದ್ರ, ಬಳಿಕ ಪದ್ಮನಾಭನಗರದಲ್ಲಿರುವ ಎಚ್​.ಡಿ.ದೇವೇಗೌಡರ ನಿವಾಸದಲ್ಲಿ ಮಾಜಿ ಪ್ರಧಾನಿಗಳನ್ನು ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಶಾಸಕ ಎಂ.ಕೃಷ್ಣಪ್ಪ, ಸಿ.ಕೆ.ರಾಮಮೂರ್ತಿ, ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಶಾಸಕ ಡಿ.ಸಿ.ತಮ್ಮಣ್ಣನವರು ಉಪಸ್ಥಿತರಿದ್ದರು.

ಇನ್ನು ”ಕರುನಾಡಿನ ಹೆಮ್ಮೆ, ಗೌರವಾನ್ವಿತ ಮಾಜಿ ಪ್ರಧಾನಿ ಶ್ರೀ ಹೆಚ್‌.ಡಿ. ದೇವೇಗೌಡರನ್ನು ಅವರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆಯಲಾಯಿತು. ಈ ವೇಳೆ ಅವರು ಪ್ರೀತಿಯಿಂದ ಸನ್ಮಾನಿಸಿ ಶುಭ ಹಾರೈಸಿದ್ದು ನನ್ನ ರಾಜಕೀಯ ಜೀವನದ ಅವಿಸ್ಮರಣಿಯ ಕ್ಷಣವಾಗಿಸಿತು. ಈ ಹೊತ್ತಿಗೂ ಸ್ಫೂರ್ತಿಯ ಚಿಲುಮೆ ಯಾಗಿರುವ ಅವರ ‘ಹೋರಾಟದ ಛಲ – ಆತ್ಮಸ್ಥೈರ್ಯದ ಬಲ’ ನನ್ನಂಥವರಿಗೆ ಸದಾ ಪ್ರೇರಣಾ ಶಕ್ತಿಯಾಗಿದೆ” ಎಂದು ದೇವೇಗೌಡರ ಭೇಟಿ ಬಗ್ಗೆ ವಿಜಯೇಂದ್ರ ಅವರು ಟ್ವಟರ್ ನಲ್ಲಿ ಬರೆದುಕೊಂಡಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

14 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

16 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

16 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

16 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

17 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

17 hours ago