ಬೆಂಗಳೂರು : ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಹಾಗೂ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಭಾಸ್ಕರ್ ರಾವ್ ಅವರ ಸ್ವಯಂ ನಿವೃತ್ತಿ ಅರ್ಜಿಯನ್ನು ಸರ್ಕಾರ ಒಪ್ಪಿಗೆ ನೀಡಿದ್ದು, ಡಿ.31ರಂದು ಸ್ವಯಂ ನಿವೃತ್ತಿ ಹೊಂದಲಿದ್ದಾರೆ ಎಂದು ತಿಳಿದುಬಂದಿದೆ.
ಸರ್ಕಾರವು, ತಮ್ಮ ಸ್ವಯಂ ನಿವೃತ್ತಿಯ ಅರ್ಜಿಯನ್ನು ಅನುಮೋದಿಸಿದೆ ಎಂದು ಹೇಳಿದ್ದಾರೆ.
ಸ್ವಯಂ ನಿವೃತ್ತಿಯ ಬಳಿಕ ಭಾಸ್ಕರ್ ರಾವ್ ಅವರು ಮುಂದಿನ ದಿನಗಳಲ್ಲಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ಎನ್ನುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ನಾನು ಟ್ರಾವೆಲ್ ಮಾಡಲು ಬಯಸಿದ್ದೇನೆ. ಅಲ್ಲದೇ, ನನ್ನ ಕುಟುಂಬಸ್ಥರೊಂದಿಗೆ ಸಮಯ ಕಳೆಯುವುದು, ಪಾಠ ಹೇಳಿಕೊಡುವುದರೊಂದಿಗೆ ಕಾಲ ಕಳೆಯಲು ಇಚ್ಛಿಸಿದ್ದೇನೆ” ಎಂದಿದ್ದಾರೆ.
1954ರಲ್ಲಿ ಜನಿಸಿದ ಭಾಸ್ಕರ್ ರಾವ್ ಅವರು 2019-20ರ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದರು. ಇವರು ಕರ್ನಾಟಕ ಮೀಸಲು ಪೊಲೀಸ್ ಪಡೆ, ಆಂತರಿಕ ಭದ್ರತಾ ವಿಭಾಗದಲ್ಲಿ ಸಹ ಕೆಲಸ ನಿರ್ವಹಿಸಿದ್ದರು. 1900ನೇ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಭಾಸ್ಕರ್ ರಾವ್ ಹಾಲಿ ರೈಲ್ವೇ ಇಲಾಖೆಯ ಎಡಿಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಈ ವರ್ಷದ ಸೆಪ್ಟೆಂಬರ್‌ನಲ್ಲಿ ಭಾಸ್ಕರ್ ರಾವ್ ಅವರು ಸೇವೆಯಿಂದ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ತಕ್ಷಣವೇ ಅನುಮೋದನೆ ನೀಡಬೇಕು ಎಂದು ಅರ್ಜಿಯನ್ನು ಕೋರಿದ್ದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…