Featured

ಎದೆಯ ಮೇಲೆ ‘ಯೋಗಿ’ ಹಚ್ಚೆ :  ಅಭಿಮಾನ ಮೆರೆದ ಮುಸ್ಲಿಂ ಯುವಕ- Vishwnaews24

ಎದೆಯ ಮೇಲೆ ‘ಯೋಗಿ’ ಹಚ್ಚೆ :  ಅಭಿಮಾನ ಮೆರೆದ ಮುಸ್ಲಿಂ ಯುವಕ

ಲಖನೌ: ಉತ್ತರ ಪ್ರದೇಶ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಒಂದಿಲ್ಲೊಂದು ಕಾರಣಗಳಿಂದ ಕೋಮು ಸಂಘರ್ಷಗಳು ನಡೆಯುತ್ತಿವೆ. ಈ ಮಧ್ಯೆ ಮುಸ್ಲಿಂ ಯುವಕನೊಬ್ಬ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಚಿತ್ರವನ್ನು ಎದೆಯ ಮೇಲೆ ಹಚ್ಚೆ ಹಾಕಿಸಿಕೊಂಡು ಅಭಿಮಾನ ತೋರಿದ್ದಾನೆ.

23 ವರ್ಷ ವಯಸ್ಸಿನ ಯಮೀನ್‌ ಸಿದ್ದಿಖಿ ತನ್ನ ಎದೆಯ ಮೇಲೆ ಯೋಗಿ ಆದಿತ್ಯನಾಥ್‌ ಅವರ ಚಿತ್ರವನ್ನು ಹಚ್ಚೆ ಹಾಕಿಸಿಕೊಂಡಿದ್ದಾನೆ. ಯೋಗಿ ತನ್ನ ಮಾದರಿ ವ್ಯಕ್ತಿ ಎಂದು ಹೇಳಿಕೊಂಡಿರುವ ಆತ, ಯೋಗಿ ಅವರ ಜನ್ಮದಿನ ಪ್ರಯುಕ್ತ ಹಚ್ಚೆ ಹಾಕಿಸಿಕೊಂಡಿದ್ದಾಗಿ ಹೇಳಿದ್ದಾನೆ.

ಉತ್ತರ ಪ್ರದೇಶದ ಮೈನ್ಪುರಿ ಮತ್ತು ಫರುಖಾಬಾದ್‌ ಜಿಲ್ಲೆಗಳ ಗಡಿ ಭಾಗದ ಹಳ್ಳಿಯಲ್ಲಿ ಸಿದ್ದಿಖಿ ವಾಸಿಸುತ್ತಿದ್ದು, ಪಾದರಕ್ಷೆಗಳ ವ್ಯಾಪಾರ ನಡೆಸುತ್ತಿದ್ದಾನೆ.

ಯೋಗಿ ಅವರ ಹಚ್ಚೆ ಹಾಕಿಸಿಕೊಂಡಾಗಿನಿಂದ ಸ್ನೇಹಿತರು ಮತ್ತು ಸಂಬಂಧಿಕರಿಂದ ಸಾಕಷ್ಟು ಟೀಕೆ ವ್ಯಕ್ತವಾಗುತ್ತಿದ್ದರೂ, ಆ ಬಗ್ಗೆ ತಲೆ ಕಡೆಸಿಕೊಂಡಿಲ್ಲ ಎಂದು ಸಿದ್ದಿಖಿ ಹೇಳಿರುವುದಾಗಿ ವರದಿಯಾಗಿದೆ.

ಯೋಗಿ ಆದಿತ್ಯನಾಥ್‌ ಅವರನ್ನು ಭೇಟಿ ಮಾಡಿ, ಅವರಿಗೆ ಹಚ್ಚೆ ತೋರಿಸುವ ಆಸೆಯಿದೆ. ಅವರ ಮೇಲೆ ಅಪಾರ ಪ್ರೀತಿ ಮತ್ತು ಗೌರವವಿದೆ. ಅವರು ಅಧಿಕಾರಕ್ಕೆ ಬಂದಾಗಿನಿಂದ ಉತ್ತರ ಪ್ರದೇಶದಲ್ಲಿ ಬದಲಾವಣೆ ತಂದಿದ್ದಾರೆ. ಹಿಂದೂ ಮತ್ತು ಮುಸ್ಲಿಮರು ಎಲ್ಲರೂ ಎಲ್ಲ ಕಲ್ಯಾಣ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ, ಅದರಲ್ಲಿ ಯಾವುದೇ ತಾರತಮ್ಯ ಇಲ್ಲ’ ಎಂದು ಸಿದ್ದಿಖಿ ಹೇಳಿದ್ದಾನೆ.

 

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago