ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ : ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು -Vishwanews24

Featured, ರಾಷ್ಟ್ರ ನ್ಯೂಸ್

ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ : ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು -Vishwanews24

ಕೋಲ್ಕತ್ತಾ: ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕುಟುಂಬ ಸದಸ್ಯರು ನೀಡಿರುವ ಮಾಹಿತಿಯ ಪ್ರಕಾರ ಬುಧವಾರ ಜ.27 ರಂದು ಬೆಳಿಗ್ಗೆ ಸೌರವ್ ಗಂಗೂಲಿ ಅವರಿಗೆ ಸಣ್ಣ ಪ್ರಮಾಣದ ಎದೆ ನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಕೋಲ್ಕತ್ತಾದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳವಾರ ಸಂಜೆ ಗಂಗೂಲಿ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಬಳಿಕ ಮತ್ತೆ ಬುಧವಾರ ಬೆಳಿಗ್ಗೆ ಸಣ್ಣ ಪ್ರಮಾಣದಲ್ಲಿ ಎದೆ ನೋವು ಕಾಣಿಸಿಕೊಂಡಿದೆ.

ಕಳೆದ ತಿಂಗಳು ಲಘು ಹೃದಯಾಘಾತ ಎದುರಿಸಿದ್ದ ಸೌರವ್ ಗಂಗೂಲಿ ವುಡ್ಲ್ಯಾಂಡ್ಸ್ ಆಸ್ಪತ್ರೆಯಲ್ಲಿ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಂಡಿದ್ದರು. ವೈದ್ಯರು ಉಳಿದ ಹೃದಯನಾಳಗಳಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಮತ್ತೊಮ್ಮೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ಮಾಡಿಸಿಕೊಳ್ಳಲು ಸಲಹೆ ನೀಡಿದ್ದರು.

ಮಂಗಳೂರು : ಪಕ್ಷದ ಬೆಳವಣಿಗೆಗೆ ಕಾರ್ಯಕರ್ತರು ಹರಿಸುವ ಬೆವರಿನಿಂದ ದೇಶದಾದ್ಯಂತ ಭಾರತೀಯ ಜನತಾ ಪಾರ್ಟಿಯು ಸದೃಢ ವೃಕ್ಷದಂತೆ ಬೆಳೆದಿದೆ : ಶಾಸಕ ವೇದವ್ಯಾಸ್ ಕಾಮತ್ -Vishwanews24