Featured

ಎನ್​ಡಿಎ ಸಂಸದೀಯ ನಾಯಕರಾಗಿ ನರೇಂದ್ರ ಮೋದಿ ಆಯ್ಕೆ – vishwanews24

ಪ್ರಧಾನಿ ಮೋದಿಯನ್ನು 18ನೇ ಲೋಕಸಭೆಯ ನಾಯಕನನ್ನಾಗಿ ಆಯ್ಕೆ ಮಾಡಿದ ಎನ್​ಡಿಎ ಸಂಸದರು

ಪ್ರಧಾನಿ ನರೇಂದ್ರ ಮೋದಿಯವರನ್ನು 18ನೇ ಲೋಕಸಭೆಯ ನಾಯಕನ್ನಾಗಿ ಎನ್​ಡಿಎ ಸಂಸದರು ಆಯ್ಕೆ ಮಾಡಿದ್ದಾರೆ. ಈ ಮೊದಲು ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎನ್‌ಡಿಎ ನಾಯಕರು ಔಪಚಾರಿಕವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೈತ್ರಿಕೂಟದ ನಾಯಕರನ್ನಾಗಿ ಆಯ್ಕೆ ಮಾಡಿದ್ದರು. ಇಂದು ಅಧಿಕೃತವಾಗಿ ಎನ್​ಡಿಎಯ ಎಲ್ಲಾ ಸಂಸದರು ಮೋದಿಯನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದ್ದಾರೆ.

ಇನ್ನೂ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚಿಸಲು ಅವಕಾಶ ನೀಡುವಂತೆ ಮನವಿ ಮಾಡಲಿದ್ದಾರೆ ಅದಾದ ಬಳಿಕ ಮುರ್ಮು ಅವರು ಪ್ರಮಾಣವಚನ ಸ್ವೀಕರಿಸಲು ಒಪ್ಪಿಗೆ ನೀಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಬಾರಿ ಆ ಹುದ್ದೆಯನ್ನು ಅಲಂಕರಿಸಲು ವೇದಿಕೆ ಸಿದ್ಧವಾಗಿದೆ. ಬಿಜೆಪಿ ನೇತೃತ್ವದ ಎನ್ ಡಿಎ ಒಕ್ಕೂಟ ಸರ್ಕಾರ ರಚಿಸುವ ಪ್ರಸ್ತಾಪವನ್ನು ರಾಷ್ಟ್ರಪತಿಯವರಿಗೆ ಸಲ್ಲಿಸಲು ಅಣಿಯಾಗಿದ್ದು, ಮೋದಿ ಅವರು ಮೈತ್ರಿಕೂಟ ಸದಸ್ಯ ಪಕ್ಷಗಳ ಮುಖಂಡರ ಜೊತೆಗೆ ಚರ್ಚೆ ನಡೆಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago