ಪ್ರಧಾನಿ ನರೇಂದ್ರ ಮೋದಿಯವರನ್ನು 18ನೇ ಲೋಕಸಭೆಯ ನಾಯಕನ್ನಾಗಿ ಎನ್‌ಡಿಎ ಸಂಸದರು ಆಯ್ಕೆ ಮಾಡಿದ್ದಾರೆ. ಈ ಮೊದಲು ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎನ್‌ಡಿಎ ನಾಯಕರು ಔಪಚಾರಿಕವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೈತ್ರಿಕೂಟದ ನಾಯಕರನ್ನಾಗಿ ಆಯ್ಕೆ ಮಾಡಿದ್ದರು. ಇಂದು ಅಧಿಕೃತವಾಗಿ ಎನ್ಡಿಎಯ ಎಲ್ಲಾ ಸಂಸದರು ಮೋದಿಯನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದ್ದಾರೆ.
ಇನ್ನೂ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚಿಸಲು ಅವಕಾಶ ನೀಡುವಂತೆ ಮನವಿ ಮಾಡಲಿದ್ದಾರೆ ಅದಾದ ಬಳಿಕ ಮುರ್ಮು ಅವರು ಪ್ರಮಾಣವಚನ ಸ್ವೀಕರಿಸಲು ಒಪ್ಪಿಗೆ ನೀಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಬಾರಿ ಆ ಹುದ್ದೆಯನ್ನು ಅಲಂಕರಿಸಲು ವೇದಿಕೆ ಸಿದ್ಧವಾಗಿದೆ. ಬಿಜೆಪಿ ನೇತೃತ್ವದ ಎನ್ ಡಿಎ ಒಕ್ಕೂಟ ಸರ್ಕಾರ ರಚಿಸುವ ಪ್ರಸ್ತಾಪವನ್ನು ರಾಷ್ಟ್ರಪತಿಯವರಿಗೆ ಸಲ್ಲಿಸಲು ಅಣಿಯಾಗಿದ್ದು, ಮೋದಿ ಅವರು ಮೈತ್ರಿಕೂಟ ಸದಸ್ಯ ಪಕ್ಷಗಳ ಮುಖಂಡರ ಜೊತೆಗೆ ಚರ್ಚೆ ನಡೆಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…