Featured

ಎನ್‌ಟಿಆರ್ ಮಗ ನಂದಮೂರಿ ಹರಿಕೃಷ್ಣ ಭೀಕರ ರಸ್ತೆ ಅಪಘಾತದಲ್ಲಿ ಸಾವು https://wp.me/p9KQap-3Tf

ಹೈದರಾಬಾದ್:ತೆಲುಗು ಚಿತ್ರರಂಗದ ಖ್ಯಾತ ನಟ ಎನ್‌.ಟಿ ರಾಮರಾವ್ ಅವರ ಮಗ, ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಬಾಮೈದ ನಂದಮೂರಿ ಹರಿಕೃಷ್ಣ (61) ಬುಧವಾರ ನಸುಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಅಭಿಮಾನಿಯ ಮದುವೆಯಲ್ಲಿ ಭಾಗವಹಿಸಲು 4.30ರ ಸಮಯದಲ್ಲಿ ಅವರು ಮನೆಯಿಂದ ಹೊರಟಿದ್ದರು.ನೆಲ್ಲೂರು ಜಿಲ್ಲೆಯ ಕಾವಲಿಗೆ ತೆರಳುತ್ತಿದ್ದಾಗ ತೆಲಂಗಾಣದ ನಲ್ಗೊಂಡ ಬಳಿಯ ಅನ್ನೆಪರ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.ತಲೆಗೆ ತೀವ್ರವಾಗಿ ಗಾಯಗೊಂಡಿದ್ದ ಹರಿಕೃಷ್ಣ ಅವರನ್ನು ಕಾಮಿನೇನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸ್ವಯಂ ಕಾರುಚಾಲನೆ ಮಾಡುತ್ತಿದ್ದ ಹರಿಕೃಷ್ಣ, ಅತಿ ವೇಗದಿಂದ ಚಲಾಯಿಸುತ್ತಿದ್ದರು. ಆಗ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ ಎನ್ನಲಾಗಿದೆ.ಅವರ ಜತೆಗಿದ್ದ ಇನ್ನೂ ಇಬ್ಬರಿಗೆ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.ಹರಿಕೃಷ್ಣ ಅವರಿಗೆ ಮೊದಲ ಪತ್ನಿಯಿಂದ ಜಾನಕಿ ರಾಮ್, ಕಲ್ಯಾಣ ರಾಮ್ ಮತ್ತು ಸುಹಾಸಿನಿ ಎಂಬ ಮಕ್ಕಳಿದ್ದಾರೆ. ಬಳಿಕ ಮತ್ತೊಂದು ಮದುವೆಯಾಗಿದ್ದ ಅವರಿಗೆ ಜೂನಿಯರ್ ಎನ್‌ಟಿಆರ್ ಎಂದೇ ಖ್ಯಾತರಾದ ತಾರಕ ರಾಮರಾವ್ ಜನಿಸಿದ್ದರು.

1956ರ ಸೆಪ್ಟೆಂಬರ್ 2ರಂದು ಆಂಧ್ರಪ್ರದೇಶದ ನಿಮ್ಮಕರುದಲ್ಲಿ ಜನಿಸಿದ್ದ ಹರಿಕೃಷ್ಣ ಬಾಲನಟನಾಗಿ ಕಾಣಿಸಿಕೊಂಡಿದ್ದರು.ತೆಲುಗು ಚಿತ್ರರಂಗದ ಖ್ಯಾತ ನಟ, ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ನಂದಮೂರಿ ತಾರಕ ರಾಮರಾವ್ (ಎನ್‌ಟಿಆರ್) ಅವರ ನಾಲ್ಕನೆಯ ಮಗನಾಗಿದ್ದ ಹರಿಕೃಷ್ಣ, ತೆಲುಗು ದೇಶಂ ಪಾರ್ಟಿ ಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು.ಶ್ರೀ ಕೃಷ್ಣಾವತಾರಂ ಚಿತ್ರದ ಮೂಲಕ 1964ರಲ್ಲಿ ಬಾಲ ಕೃಷ್ಣನ ಪಾತ್ರದಲ್ಲಿ ಮೊದಲ ಬಾರಿಗೆ ತೆರೆ ಮೇಲೆ ಕಾಣಿಸಿದ್ದಕೊಂಡಿದ್ದ ಹರಿಕೃಷ್ಣ, ತಲ್ಲ ಪೆಲ್ಲಮಾ, ತಾತಮ್ಮ ಕಾಲ, ರಾಮ್ ರಹೀಮ್, ದಾನ ವೀರ ಶೂರ ಕರ್ಣ ಸಿನಿಮಾಗಳಲ್ಲಿ ನಟಿಸಿದ್ದರು.1977ರಿಂದ 1998ರವರೆಗೂ ಅವರು ಮತ್ತೆ ಬಣ್ಣಹಚ್ಚಿರಲಿಲ್ಲ. ಶ್ರೀ ರಾಮುಲಯ್ಯಾ ಸಿನಿಮಾದ ಮೂಲಕ ಮತ್ತೆ ಬೆಳ್ಳಿತೆರೆಗೆ ಪ್ರವೇಶಿಸಿದ್ದರು. ಸೀತಾರಾಮ ರಾಜು, ಲಹಿರಿ ಲಹಿರಿ ಲಹಿರಿಲೊ, ಶಿವರಾಮ ರಾಜು, ಸೀತಯ್ಯಾ, ಟೈಗರ್ ಹರಿಶ್ಚಂದ್ರ ಪ್ರಸಾದ್, ಸ್ವಾಮಿ ಚಿತ್ರಗಳಲ್ಲಿ ನಟಿಸಿದ್ದರು. 2005ರಲ್ಲಿ ನಟಿಸಿದ್ದ ಶ್ರಾವಣಮಾಸಂ ಅವರ ಕೊನೆಯ ಚಿತ್ರವಾಗಿದೆ.

 

 

 

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago