ಬೆಂಗಳೂರು : ದೇಶದ ಜನರನ್ನು ಸಂದೇಹಾಸ್ಪದ ನಾಗರಿಕರನ್ನಾಗಿ ಮಾಡಲು ಹೊರಟಿರುವ ಎನ್‌ಪಿಆರ್ ಮತ್ತು ಎನ್‌ಆರ್‌ಸಿ ಕಾಯ್ದೆಗಳನ್ನು ವಿರೋಧಿಸಿ ವಿವಿಧ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಮಾ.12ರಂದು ರಾಜ್ಯಾದ್ಯಂತ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಂಡಿದೆ ಎಂದು ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.
ಮಂಗಳವಾರ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಬಡ ಹಾಗೂ ಮಧ್ಯಮ ವರ್ಗದ ಜನರನ್ನು ಕೇಂದ್ರ ಸರ್ಕಾರದ ನೀತಿಗಳು ಕಷ್ಟಕ್ಕೆ ದೂಡಿದೆ. ಎನ್‌ಆರ್‌ಸಿಗೆ ಎನ್‌ಪಿಆರ್ ಕಾಯ್ದೆಯು ಪೂರಕವಾಗಿದೆ. ಎ.15 ರಿಂದ ಜನರ ಗಣತಿ ಆರಂಭಿಸುತ್ತಾರೆ. ಹುಟ್ಟಿದ ದಾಖಲೆ ಇಲ್ಲದವರನ್ನು ಸಂದೇಹಾಸ್ಪದ ನಾಗರಿಕರ ಸಾಲಿಗೆ ಸೇರಿಸುತ್ತಾರೆ. ಸಾರ್ವಜನಕರಿಗೆ ಕಷ್ಟ ಉಂಟು ಮಾಡುವ ಇಂತಹ ಕಾಯ್ದೆಯ ವಿರುದ್ಧವಾಗಿ ನಾವೆಲ್ಲರೂ ಹೋರಾಡಬೇಕು ಎಂದು ಹೇಳಿದರು.
ಎನ್‌ಆರ್‌ಪಿ ಹಾಗೂ ಎನ್‌ಆರ್‌ಸಿಯಲ್ಲಿ ಹಲವು ಲೋಪಗಳಿವೆ. ಸಂವಿಧಾನದ ಆಶಯಗಳಿಗೆ ವಿರುದ್ಧವಾದ ಕಾಯ್ದೆ ಇದಾಗಿದೆ. ಜನರಿಗೆ ತೊಂದರೆ ಉಂಟು ಮಾಡುವ ಈ ಕಾಯ್ದೆಯನ್ನು ಸಾರ್ವಜನಿಕವಾಗಿ ವಿರೋಧ ಮಾಡುತ್ತಿದ್ದೇವೆ. ಈ ಹಿನ್ನಲೆಯಲ್ಲಿ ರಾಜ್ಯದಾದ್ಯಂತ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರಿನ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಹಾಗೂ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿಗಳ ಮುಂಭಾಗ ಬೆಳಗ್ಗೆ 9 ರಿಂದ 6 ರವರೆಗೆ ಉಪವಾಸ ಸತ್ಯಾಗ್ರಹ ನಡೆಸಲಿದ್ದೇವೆ. ಈ ಸತ್ಯಾಗ್ರಹದಲ್ಲಿ ವಿವಿಧ ಗ್ರಾಮಗಳಿಂದ ಸಾವಿರಾರು ಜನರು ಭಾಗವಹಿಸಲಿದ್ದಾರೆ ಎಂದರು.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…