Featured

ಎಪ್ರಿಲ್ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ: ಸಚಿವ ಕೆ. ಎಚ್.ಮುನಿಯಪ್ಪ – Vishwanews24

ಎಪ್ರಿಲ್ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ: ಸಚಿವ ಕೆ. ಎಚ್.ಮುನಿಯಪ್ಪ

ಬೆಂಗಳೂರು: ಹೊಸ ಆದ್ಯತಾ ಪಡಿತರ ಚೀಟಿ(ಎಪಿಎಲ್)ಯನ್ನು ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಮಾರ್ಚ್ 31ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಇಲಾಖಾ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.

ಶಾಸಕರಾದ ನಯನಾ ಮೋಟಮ್ಮ ಮತ್ತು ಯಶ್ಪಾಲ್ ಸುವರ್ಣ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೊಸ ಆದ್ಯತಾ ಪಡಿತರ ಚೀಟಿ(ಎಪಿಎಲ್) ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ಪರಿಶೀಲಿಸಿ ವಿಲೇವಾರಿ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಈವರೆಗೆ 57,651 ಹಾಗೂ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ 744 ಕಾರ್ಡ್ಗಳನ್ನು ವಿತರಿಸಲಾಗಿದೆ. ಬಾಕಿ ಇರುವ ಉಳಿದ ಹೊಸ ಆದ್ಯತಾ ಪಡಿತರ ಚೀಟಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಲು ಜಂಟಿ/ಉಪನಿರ್ದೇಶಕರುಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದರು.

ಈ ಹಿಂದಿನ ಸರಕಾರದ ಅವಧಿಯಲ್ಲಿ ಈಅರ್ಜಿಗಳನ್ನು ಸಲ್ಲಿಸಲಾಗಿತ್ತು. ಚುನಾವಣೆ ಹಾಗೂ ಇನ್ನೀತರ ಕಾರಣಗಳಿಂದ ಈ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗಿತ್ತು. ಅವುಗಳನ್ನು ವಿಲೇವಾರಿ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಅವುಗಳನ್ನು ಮಾ.31ರೊಳಗೆ ವಿಲೇವಾರಿ ಮಾಡಿ ಎಪ್ರಿಲ್ 1ರಿಂದ ಹೊಸ ಅರ್ಜಿಗಳ ಆಹ್ವಾನಿಸುವುದಕ್ಕೆ ಅವಕಾಶ ನೀಡಲಾಗುವುದು ಎಂದರು.

ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಹೊಸದಾಗಿ ಆದ್ಯತಾ ಪಡಿತರ ಚೀಟಿ ಕೋರಿ ತಹಶೀಲ್ದಾರ್ ಶಿಫಾರಸು ವರದಿ ಆಧರಿಸಿ ಬರುವ ಅರ್ಜಿಗಳನ್ನು ಆದ್ಯತೆ ಮೇರೆಗೆ ಕಾರ್ಡ್ ಒದಗಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದರು.

ಉಡುಪಿ ಜಿಲ್ಲೆಯಲ್ಲಿ 2021 ಜನವರಿಯಿಂದ 2023ರ ಮಾರ್ಚ್ ವರೆಗೆ 13,104 ಆದ್ಯತಾ ಪಡಿತರ ಚೀಟಿ ಕೋರಿ ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ 10,738 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಉಳಿದವುಗಳನ್ನು ಪರಿಶೀಲಿಸಿ ಅರ್ಹ ಅರ್ಜಿಗಳಿಗೆ ಕಾರ್ಡ್ ಒದಗಿಸುವುದಕ್ಕೆ ಕ್ರಮ ವಹಿಸಲಾಗುವುದು ಎಂದು ವಿವರಿಸಿದ ಸಚಿವ ಮುನಿಯಪ್ಪ, ಉಡುಪಿ ಜಿಲ್ಲೆಯಲ್ಲಿ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ 134 ಅರ್ಹ ಫಲಾನುಭವಿಗಳಿಗೆ ಆದ್ಯತಾ ಪಡಿತರ ಚೀಟಿಗಳನ್ನು ವಿತರಿಸಲಾಗಿದೆ ಎಂದರು

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

5 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

5 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

6 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

6 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

6 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

6 hours ago