Featured

ಎಪ್ರಿಲ್ 10 ರಿಂದ 20 ರವರೆಗೆ ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೆ: ಸಾಂಪ್ರದಾಯಿಕ ಉಡುಗೆಗಳಿಗೆ ಮಾತ್ರ ಅವಕಾಶ – Vishwanews24

ಎಪ್ರಿಲ್ 10 ರಿಂದ 20 ರವರೆಗೆ ಪುತ್ತೂರು ಮಹಾಲಿಂಗೇಶ್ವರ ಜಾತ್ರೆ: ಭಕ್ತಾದಿಗಳಿಗೆ ಕಡ್ಡಾಯ ವಸ್ತ್ರ ಸಂಹಿತೆ ಜಾರಿ

ಪುತ್ತೂರು, : ದಕ್ಷಿಣಕನ್ನಡ ಜಿಲ್ಲೆಯ ಹೆಸರಾಂತ ಶಿವಕ್ಷೇತ್ರ ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎಪ್ರಿಲ್ 10 ರಿಂದ 20 ರವರೆಗೆ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಹೇಳಿದರು.

ಎಪ್ರಿಲ್ 10 ರಂದು ಬೆಳಿಗ್ಗೆ 9.25 ಕ್ಕೆ ಧ್ವಜಾರೋಹಣ ನೆರವೇರಲಿದ್ದು, ಎಪ್ರಿಲ್‌ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಭೇಟಿ, ಎಪ್ರಿಲ್ 17 ರಂದು ಸಿಡಿಮದ್ದು ಪ್ರದರ್ಶನ ಹಾಗು ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ನಡೆಯಲಿದೆ ಎಂದರು.

ಈ ಬಾರಿ ದೇವರ ಪುಷ್ಕರಣಿಯಲ್ಲಿ ವರುಣ ದೇವರ ವಿಗ್ರಹದ ಪ್ರತಿಷ್ಠಾಪನೆ ಮಾಡಲಾಗುತ್ತಿದ್ದು, ಪುಷ್ಕರಣಿಯಲ್ಲಿ ಇಳಿಯುವ ಭಕ್ತಾಧಿಗಳಿಗೆ ಕಡ್ಡಾಯ ವಸ್ತಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಕೇವಲ ಸಾಂಪ್ರದಾಯಿಕ ಉಡುಗೆಯಲ್ಲಿ ಬರುವ ಭಕ್ತಾಧಿಗಳಿಗೆ ಮಾತ್ರ ವರುಣ ದೇವರಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಎಂದ ಅವರು ದೇವರ ಬ್ರಹ್ಮರಥ ಎಳೆಯುವ ಸೇವಾಕರ್ತರಿಗೂ ವಸ್ತ್ರಸಂಹಿತೆ ಕಡ್ಡಾಯವಾಗಿದೆ.

ಜಾತ್ರೆ ನಡೆಯುವ ಹತ್ತು ದಿನವೂ ಭಕ್ತಾಧಿಗಳು ಸಾಂಪ್ರದಾಯಿಕ ಉಡುಗೆಯಲ್ಲೇ ದೇವಸ್ಥಾನಕ್ಕೆ ಬರಬೇಕು ಎನ್ನುವುದು ಸಮಿತಿಯ ಆಗ್ರಹವಾಗಿದೆ ಎಂದು ಅವರು ಹೇಳಿದರು.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

11 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

19 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

19 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

19 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

19 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

20 hours ago