ಹುಬ್ಬಳ್ಳಿ: ಪ್ರಿಯಾಂಕ ಖರ್ಗೆ ಶಾಸಕರಾದರೂ ಕ್ಷೇತ್ರದಲ್ಲಿ ಅವರಿಗೆ ಯಾವುದೇ ಕೆಲಸವಿಲ್ಲ ಅನ್ನಿಸುತ್ತದೆ. ಹುಡುಕಿ ಹುಡುಕಿ ಎಫ್.ಐ.ಆರ್ ಹಾಕಿಸುವುದೇ ಅವರು ಫುಲ್ ಟೈಮ್ ಕೆಲಸ ಮಾಡಿಕೊಂಡಿದ್ದಾರೆ. ಆದರೆ ಅವರು ಹಾಕಿರುವ ಕೇಸ್ ಗಳನ್ನು ಸುಪ್ರೀಂ ಕೋರ್ಟ್ ಛೀಮಾರಿ ಹಾಕಿ ವಾಪಸ್ ಕಳುಹಿಸುತ್ತದೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಪಿಸಿ ಸಮಿತಿ ಹಾವೇರಿ ಭೇಟಿ ನೀಡಿದ ಸಂದರ್ಭದಲ್ಲಿ ರೈತನ ಅಹವಾಲು ಪಡೆದಿದ್ದೆವು. ಅವರ ಜಮೀನಿಗೆ ವಕ್ಫ್ ಮೊಹರು ಹಾಕಲಾಗಿತ್ತು. ಇದರಿಂದ ರೈತ ಸಣ್ಣಪ್ಪ ಎಂಬುವರು ರೈತ ಆತ್ಮಹತ್ಯೆ ಮಾಡಿಕೊಂಡಿದ್ದ ಎಂದು ಕುಟುಂಬದವರು ಹೇಳಿದ್ದರು. ಇದು ಮಾಧ್ಯಮದಲ್ಲಿ ಪ್ರಸಾರ ಆಗಿತ್ತು. ಇದರ ಬಗ್ಗೆ ಎಕ್ಸ್ (ಟ್ವೀಟ್) ಮಾಡಿದ್ದೆ. ಇದನ್ನೇ ಇಟ್ಟುಕೊಂಡು ನನ್ನ ವಿರುದ್ಧ ಸಚಿವ ಪ್ರಿಯಾಂಕ ಖರ್ಗೆ ಅವರು ಎಫ್.ಐ.ಆರ್ ಮಾಡಿಸಿದ್ದಾರೆ ಎಂದರು.
ನಾನು ಮಾಡಿದ ಟ್ವೀಟ್ ಗೆ ಹಾವೇರಿ ಎಸ್ಪಿ ಅಕೌಂಟ್ ರೀತಿ ಘಟನೆ ಆಗಿಲ್ಲ ಎಂದು ಮರು ಟ್ವೀಟ್ ಮಾಡಿದ್ದರು. ಕಾನೂನು ವ್ಯವಸ್ಥೆಗೆ ಗೌರವ ಇರುವುದರಿಂದ ಟ್ವೀಟ್ ಡಿಲೀಟ್ ಮಾಡಿದೆ. ಆನಂತರ ನಾನು ಪರಿಶೀಲಿಸಿ ಹಾಕಬೇಕಿತ್ತೇನೋ ಎಂದು ಅದನ್ನು ರೀ ಟ್ವೀಟ್ ಮಾಡಿರುತ್ತೇನೆ. ಇಒ ವಿಚಾರದಲ್ಲಿ ನನ್ನನ್ನು ಎ1 ಹಾಗೂ ಆ ವೆಬ್ ಮಾಧ್ಯದವರನ್ನು ಎ2 ಮಾಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಕುಟುಂಬದವರು ಹಾಗೂ ಮಾಧ್ಯಮದವರು ನನ್ನನ್ನು ಸಂಪರ್ಕಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಪಹಣಿ ಪ್ರಿಂಟ್ ತೆಗದುಕೊಡುತ್ತೇನೆ. ರಾಜಕಾರಣಕ್ಕಾಗಿ ರೈತರ ಭೂಮಿಯನ್ನು ವಕ್ಫ್ ಮಂಡಳಿಗೆ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…