ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ ವತಿಯಿಂದ ಗ್ರಾಮಾಂತರ ಭಾಗಗಳಿಂದ ಕುಂದಾಪುರ ನಗರಕ್ಕೆ ವಿದ್ಯಾಭ್ಯಾಸಕ್ಕಾಗಿ ಬರುವ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ಐದು ದಿನಗಳ ಹಿಂದೆ ( 8-6-2024) ಶಾಸ್ತ್ರಿ ಸರ್ಕಲ್ ನಿಂದ ತಾಲೂಕು ಆಫೀಸಿನ ವರೆಗೆ ಬೃಹತ್ ಪ್ರತಿಭಟನಾ ಜಾಥಾ ನಡೆಸಿ, ಕುಂದಾಪುರ ತಹಶೀಲ್ದಾರ, ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ ಸೇರಿದಂತೆ, ಕುಂದಾಪುರ ಮತ್ತು ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಿಗೆ ಆಗ್ರಹವನ್ನು ಇರಿಸಿ ಎಚ್ಚರಿಸಿದರು ಇದರ ಪರಿಣಾಮ ಮೊದಲ ಹಂತದಲ್ಲಿ ಎಬಿವಿಪಿ ಬೇಡಿಕೆಯಂತೆ ಆಜ್ರಿಯಿಂದ ಕುಂದಾಪುರಕ್ಕೆ ಬಸ್ ಬಿಟ್ಟಿರುವುದು ಶ್ಲಾಘನೀಯ.
ಈಗಾಗಲೇ ಆಜ್ರಿಯಿಂದ ನೇರಳಕಟ್ಟೆ ತಲ್ಲೂರು ಮಾರ್ಗವಾಗಿ ಕುಂದಾಪುರಕ್ಕೆ ಮಾಡಿದ ಬಸ್ ವ್ಯವಸ್ಥೆಯಿಂದಾಗಿ ಕೇವಲ ವಿದ್ಯಾರ್ಥಿಗಳಿಗಲ್ಲದೆ ಸಾರ್ವಜನಿಕರಿಗೂ ಸಹಾಯಕವಾಗಿದೆ. ಅನೇಕ ಸಮಯದಿಂದ ಈ ಮಾರ್ಗಕ್ಕೆ ಬಸ್ ನ ಬೇಡಿಕೆ ಇದ್ದರೂ ಅಧಿಕಾರಿಗಳಿಗೆ ವಿವಿಧ ರೀತಿಯಲ್ಲಿ ಮನವಿ ಸಲ್ಲಿಸಿದರೂ ಸಮರ್ಪಕ ಬಸ್ ವ್ಯವಸ್ಥೆ ಮಾಡದ ಅಧಿಕಾರಿಗಳು ಹೋರಾಟ ನಡೆಸಿದ ಐದು ದಿನಗಳ ಒಳಗೆ ಬಸ್ ಬಿಟ್ಟಿರುವುದು ವಿದ್ಯಾರ್ಥಿಗಳ ಧ್ವನಿಯ ಬೆಲೆಯನ್ನು ಸಾರುತ್ತದೆ.
ಇನ್ನು ಸುಮಾರು 15 ಕ್ಕೂ ಹೆಚ್ಚು ಮಾರ್ಗಗಳಲ್ಲಿ ಬಸ್ ವ್ಯವಸ್ಥೆ ಮಾಡುವ ಅವಶ್ಯಕತೆ ಇದ್ದು ಆದಷ್ಟು ಬೇಗ ಇದು ಆಗುವಂತೆ ಮಾರ್ಗದ ಅವಶ್ಯಕತೆಯ ಕುರಿತು ಈಗಾಗಲೇ ಎಬಿವಿಪಿ ವಿದ್ಯಾರ್ಥಿಗಳ ಆಗ್ರಹದ ಧ್ವನಿಯಾಗಿ ಅಧಿಕಾರಿಗಳೊಂದಿಗೆ ಚರ್ಚಿಸುತ್ತಿದೆ ಮತ್ತು ಮುಂದೆ ಬರುವ 15 ದಿನಗಳ ವೊಳಗೆ ಎಲ್ಲಾ ಮಾರ್ಗಗಳಿಗೆ ಬಸ್ ವ್ಯವಸ್ಥೆ ಆಗುವ ಭರವಸೆಯೂ ಇದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…