ರಾಜ್ಯ ನ್ಯೂಸ್

ಎರಡನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಮುಷ್ಕರ  – vishwanews24

ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ:

ಎರಡನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಮುಷ್ಕರ

ಬೆಂಗಳೂರು: ಮಾಸಿಕ 15,000 ರೂ. ಗ್ಯಾರಂಟಿ ಗೌರವಧನ ನಿಗದಿ ಹಾಗೂ 5 ಲಕ್ಷ ರೂ. ನಿವೃತ್ತಿ ಇಡಿಗಂಟು ಸೇರಿದಂತೆ ವಿವಿಧ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾವಿರಾರು ಆಶಾ ಕಾರ್ಯಕರ್ತೆಯರು ರಾಜಧಾನಿ ಬೆಂಗಳೂರಿನಲ್ಲಿ ನಡೆಸುತ್ತಿರುವ ಅಹೋರಾತ್ರಿ ಅನಿರ್ದಿಷ್ಟಾವಧಿ ಮುಷ್ಕರ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳ ಆಶಾ ಕಾರ್ಯಕರ್ತೆಯರು ಈ ಬೃಹತ್ ಹೋರಾಟದಲ್ಲಿ ಪಾಲ್ಗೊಂಡಿದ್ದು, ಬೇಡಿಕೆ ಈಡೇರಿಕೆ ಕುರಿತು ರಾಜ್ಯ ಸರ್ಕಾರ ಲಿಖಿತ ರೂಪದಲ್ಲಿ ಭರವಸೆ ಪತ್ರ ನೀಡುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುತ್ತಿರುವ ಆಶಾ ಕಾರ್ಯಕರ್ತೆಯರ ಬೆಂಗಳೂರಿನ ಫ್ರೀಡಂ ಪಾರ್ಕ್ ಆವರಣದಲ್ಲಿ ಜಮಾಯಿಸಿದ್ದಾರೆ. ಕರ್ನಾಟಕದಲ್ಲಿ ಸದ್ಯ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ 5,000 ಹಾಗೂ ಕೇಂದ್ರ ಸರ್ಕಾರದಿಂದ 3,000 ಸೇರಿ ಒಟ್ಟು 8,000 ರೂ. ಮಾತ್ರ ಗೌರವಧನ ಸಿಗುತ್ತಿದೆ. ಆದರೆ ನೆರೆಯ ಮತ್ತು ಇತರ ರಾಜ್ಯಗಳಲ್ಲಿ ಹೆಚ್ಚಿನ ಗೌರವಧನ ನೀಡಲಾಗುತ್ತಿದೆ ಎಂದು ಆಶಾಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಮುಖ ಬೇಡಿಕೆಗಳು:

ವಿವಿಧ ರಾಜ್ಯಗಳಲ್ಲಿ ಹೆಚ್ಚಿಸಿರುವಂತೆ, ಕರ್ನಾಟಕದ ಆಶಾ ಕಾರ್ಯಕರ್ತೆಯರಿಗೂ ರಾಜ್ಯ ಸರ್ಕಾರದಿಂದ ಮಾಸಿಕ 15,000 ಗೌರವಧನ ನಿಗದಿಪಡಿಸಬೇಕು.

ಸಮಸ್ತ ಆ್ಯಪ್’ ಮೂಲಕ ಒತ್ತಾಯದ ಮೊಬೈಲ್ ಕೆಲಸ ಕೈಬಿಡಬೇಕು, ಇಲ್ಲವೇ ಮೊಬೈಲ್, ಸೂಕ್ತ ಪ್ರೋತ್ಸಾಹಧನ ಮತ್ತು ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು.

ಈಗಾಗಲೇ ನಿವೃತ್ತರಾಗಿರುವ ಆಶಾ ಕಾರ್ಯಕರ್ತೆಯರಿಗೆ ಬಾಕಿ ಇರುವ ಇಡಿಗಂಟನ್ನು ಕೂಡಲೇ ಪಾವತಿಸಬೇಕು.

ಆಶಾ ನಿಧಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರೋತ್ಸಾಹಧನಗಳನ್ನು ತಕ್ಷಣವೇ ಬಿಡುಗಡೆ ಮಾಡಬೇಕು.

ಆಶಾ ಸುಗಮಕಾರರನ್ನು ಮರುನೇಮಕ ಮಾಡಿ ಸೂಕ್ತ ವೇತನ ನೀಡಬೇಕು ಹಾಗೂ ಬಾಕಿ ಇರುವ ಒಂದು ವರ್ಷದ 1,500 ಪಾವತಿಸಬೇಕು.

ಎನ್‌ಐಒಎಸ್ ತರಬೇತಿ ಪೂರ್ಣಗೊಳಿಸಿದ ಆಶಾ ಮತ್ತು ಸುಗಮಕಾರರಿಗೆ ಪ್ರತಿ ತರಬೇತಿಗೆ ₹5,000 ವಿಶೇಷ ಪ್ರೋತ್ಸಾಹಧನ ನೀಡಬೇಕು.

ತೀವ್ರ ಕಾಯಿಲೆಯ ಚಿಕಿತ್ಸಾ ಅವಧಿಯಲ್ಲಿ ಕನಿಷ್ಠ ಮೂರು ತಿಂಗಳ ಗೌರವಧನ ಮತ್ತು ನಿಗದಿತ ಪ್ರೋತ್ಸಾಹಧನ ನೀಡಬೇಕು.

ಸೇವಾ ನಿವೃತ್ತಿ ಇಡಿಗಂಟನ್ನು ಪಶ್ಚಿಮ ಬಂಗಾಳದ ಮಾದರಿಯಲ್ಲಿ 5 ಲಕ್ಷಕ್ಕೆ ಹೆಚ್ಚಿಸಬೇಕು.

Vishwa News 24

Recent Posts

ಹಿಂದೆ ಕುಳಿತುಕೊಳ್ಳಲು ತಡವಾಗಿ ಬಂದಿದ್ದೇ ಕಾರಣ : ಸಿದ್ದರಾಮಯ್ಯ ಸ್ಪಷ್ಟನೆ – vishwanews24

ಹಿಂದೆ ಕುಳಿತುಕೊಳ್ಳಲು ತಡವಾಗಿ ಬಂದಿದ್ದೇ ಕಾರಣ : ಸಿದ್ದರಾಮಯ್ಯ ಸ್ಪಷ್ಟನೆ ಸೋನಿಯಾ ಗಾಂಧಿ ಆತ್ಮಚರಿತ್ರೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ 5ನೇ…

40 minutes ago

ಬ್ರಹ್ಮಾವರ: ವಿದ್ಯುತ್ ತಂತಿ ಸ್ಪರ್ಶಿಸಿ ಒಣ ಹುಲ್ಲು ಸಾಗಾಟದ ಲಾರಿಗೆ ಬೆಂಕಿ ; ಚಾಲಕ ಅಪಾಯದಿಂದ ಪಾರು – vishwanews24

ಬ್ರಹ್ಮಾವರ: ವಿದ್ಯುತ್ ತಂತಿ ಸ್ಪರ್ಶಿಸಿ ಒಣ ಹುಲ್ಲು ಸಾಗಾಟದ ಲಾರಿಗೆ ಬೆಂಕಿ ; ಚಾಲಕ ಅಪಾಯದಿಂದ ಪಾರು ಬ್ರಹ್ಮಾವರ,:ಒಣ ಹುಲ್ಲು…

52 minutes ago

ಮಂಗಳೂರು: ಮೊಟ್ಟೆ ಸಾಗಣೆ ವಾಹನದಲ್ಲಿ ಅಕ್ರಮ ಜಾನುವಾರು ಸಾಗಟ ; ಇಬ್ಬರು ಬಂಧನ – vishwanews24

ಮಂಗಳೂರು: ಮೊಟ್ಟೆ ಸಾಗಣೆ ವಾಹನದಲ್ಲಿ ಅಕ್ರಮ ಜಾನುವಾರು ಸಾಗಟ ; ಇಬ್ಬರು ಬಂಧನ ಮಂಗಳೂರು: ನಗರದ ಪಂಪ್‌ವೆಲ್ ಬಳಿ ಮೊಟ್ಟೆ…

22 hours ago

ಚಿಕಿತ್ಸೆಗೂ ಮುನ್ನವೇ ವೆಚ್ಚದ ಮಾಹಿತಿ ಕಡ್ಡಾಯ :ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಎಚ್ಚರಿಕೆ – vishwnaews24

ಚಿಕಿತ್ಸೆಗೂ ಮುನ್ನವೇ ವೆಚ್ಚದ ಮಾಹಿತಿ ಕಡ್ಡಾಯ :ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಎಚ್ಚರಿಕೆ ಬೆಂಗಳೂರು: ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ…

23 hours ago

ಶಬರಿಮಲೆಯಲ್ಲಿ ಮಂಡಲ–ಮಕರವಿಳಕ್ಕು ಯಾತ್ರೆ ಆರಂಭ ; ಅಯ್ಯಪ್ಪನ ದರ್ಶನ ಪಡೆದ ಸಾವಿರಾರು ಭಕ್ತರು -vishwanews24

ಶಬರಿಮಲೆಯಲ್ಲಿ ಮಂಡಲ–ಮಕರವಿಳಕ್ಕು ಯಾತ್ರೆ ಆರಂಭ ; ಅಯ್ಯಪ್ಪನ ದರ್ಶನ ಪಡೆದ ಸಾವಿರಾರು ಭಕ್ತರು ಶಬರಿಮಲೆ : ಪವಿತ್ರ ಕ್ಷೇತ್ರ ಶಬರಿಮಲೆ…

23 hours ago

ಬೈಕಂಪಾಡಿ : ಅನೈರ್ಮಲ್ಯ ಕಾರಣ; ಚೀಸ್ ಬಾಲ್ ಸ್ನಾಕ್ಸ್ ತಯಾರಿಕಾ ಘಟಕಕ್ಕೆ ಬೀಗ – vishwanews24

ಬೈಕಂಪಾಡಿ : ಅನೈರ್ಮಲ್ಯ ಕಾರಣ; ಚೀಸ್ ಬಾಲ್ ಸ್ನಾಕ್ಸ್ ತಯಾರಿಕಾ ಘಟಕಕ್ಕೆ ಬೀಗ ಸುರತ್ಕಲ್:‌ ಸುರತ್ಕಲ್‌ ವ್ಯಾಪ್ತಿಯಲ್ಲಿ ದ.ಕ. ಜಿಲ್ಲಾ…

24 hours ago