ಉಡುಪಿ

ಎರಡನೇ ದಿನವೂ ಮುಂದುವರಿದ ಮುನಿಯಾಲ್ ಬೆಂಬಲಿಗರ ಪ್ರತಿಭಟನೆ, ಬೆಂಬಲಿಗರನ್ನು ಸಮಾಧಾನ ಪಡಿಸಲು ಉದಯ್ ಶೆಟ್ಟಿ ಹರಸಾಹಸ

Udupi – ಕಾರ್ಕಳ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮುನಿಯಾಲು ಉದಯ ಕುಮಾರ್ ಶೆಟ್ಟಿಗೆ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಬೆಂಬಲಿಗರಿಂದ ಎರಡನೇ ದಿನವೂ ಮುಂದುವರೆಯಿತು. ನಿನ್ನೆ ಕಾರ್ಕಳದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಟಿಕೆಟ್ ಕೈತಪ್ಪಲು ಕಾರಣರಾದ ಮಾಜಿ ಸಚಿವ ವೀರಪ್ಪ ಮೊಯ್ಲಿ ಹಾಗೂ ಜೆಎ ಭಾವ ವಿರುದ್ದ ಆಕ್ರೋಶ ಹೊರಹಾಕಿದ ಕಾರ್ಯಕರ್ತರು ಮೊಯ್ಲಿ ಹಾಗೂ ಭಾವ ಅವರ ಅಣುಕು ಶವಯಾತ್ರೆ ನಡೆಸಿ ಪ್ರತಿಕೃತಿ ದಹನ ನಡೆಸಿದ್ರು ಆದರೆ ಇಂದು ಕೂಡ ಪ್ರತಿಭಟನೆ ಕಾವು ಮುಂದುವರೆದು, ಹೆಬ್ರಿಯ ಕಾಂಗ್ರೆಸ್ ಕಚೇರಿ ಎದುರು ಕಾರ್ಯಕರ್ತರು,ಬೆಂಬಲಿಗರು ಪ್ರತಿಭಟನೆ ಉದ್ವಿಗ್ನಗೊಂಡು ಓರ್ವ ಉದಯಕುಮಾರ್ ಅವರ ಬೆಂಬಲಿಗ ಮುರತಂಗಡಿಯ ಆಸೀಫ್ ಮೈಮೇಲೆ ಸೀಮೆಎಣ್ಣೆ ಸುರಿದು ಆತ್ಮಹತ್ಯೆಗೂ ಯತ್ನಿಸಿದ್ರು. ಈ ವೇಳೆ ಮಾಜಿ ಸಚಿವ ವೀರಪ್ಪ ಮೊಯಿಲಿ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ದಿಕ್ಕಾರ ಕೂಗಲಾಯಿತು. ಇನ್ನು ಇದೇ ಸಂಧರ್ಭದಲ್ಲಿ ಆಕ್ರೋಶ ಹೊರಹಾಕಿದ ಕಾರ್ಯಕರ್ತರು ಕಾರ್ಕಳದಲ್ಲಿ ಉದಯ ಕುಮಾರ್ ಶೆಟ್ಟಿಗೆ ಟೀಕೇಟ್ ನೀಡಬೇಕು ತಪ್ಪಿದ್ದಲ್ಲಿ ಉಡುಪಿ ಜಿಲ್ಲೆಯಾದ್ಯಂತ ಕಾಂಗ್ರೆಸ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದರು. ಈ ವೇಳೆ ಸ್ಥಳಕ್ಕಾಗಮಿಸಿದ ಮುನಿಯಾಲು ಉದಯ ಕುಮಾರ್ ಶೆಟ್ಟಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿ ಯಾರೂ ಪ್ರತಿಭಟನೆ ಮಾಡಬಾರದು, ಧೈರ್ಯದಿಂದಿರಿನನಗೆ ಭರವಸೆ ಇದೆ. ನಮ್ಮ ನಾಯಕರಾದ ವೀರಪ್ಪ ಮೊಯಿಲಿ ಮತ್ತು ಗೋಪಾಲ ಭಂಡಾರಿಯವರು ನನಗೆ ಸೀಟನ್ನು ಕೊನೆಯ ಕ್ಷಣದಲ್ಲಿ ಬಿಟ್ಟು ಕೊಡುತ್ತಾರೆ. ಕಾರ್ಕಳದಲ್ಲಿ ಕಾಂಗ್ರೆಸ್ ಶಾಸಕರನ್ನು ನಾವು ಕಾಣಬೇಕಾಗಿದೆ ಎಂದು ಕಾರ್ಯಕರ್ತರನ್ನು ಸಮಾಧಾನಪಡಿಸಿದ್ರು.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

1 day ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

1 day ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

1 day ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago