ಎರಡನೇ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣ ಸ್ವೀಕಾರ – Vishwanews24

Featured, ರಾಷ್ಟ್ರ ನ್ಯೂಸ್

ಎರಡನೇ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣ ಸ್ವೀಕಾರ

ಗಾಂಧಿನಗರ: ಗುಜರಾತ್ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಭೂಪೇಂದ್ರ ಪಟೇಲ್ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ಮಧ್ಯಾಹ್ನ 2 ಗಂಟೆಗೆ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇಂದು ಮಧ್ಯಾಹ್ನ ಗಾಂಧಿನಗರದ ಹೊಸ ಸಚಿವಾಲಯದ ಹೆಲಿಪ್ಯಾಡ್ ಗ್ರೌಂಡ್ ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಭೂಪೇಂದ್ರ ಪಟೇಲ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

Gujarat CM Oath Taking: ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಭೂಪೇಂದ್ರ  ಪಟೇಲ್ - Bhupendra Patel sworn in as Chief Minister of Gujarat for the  second time in a row kannada National News |

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಮತ್ತು ತ್ರಿಪುರಾ ಸಿಎಂ ಮಾಣಿಕ್ ಸಹಾ ಮುಂತಾದ ಗಣ್ಯರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು.

ಕಾಂತಾರ 2 ಮಾಡುವ ಮೊದಲು ವೀರೇಂದ್ರ ಹೆಗ್ಗಡೆಯವರ ಅನುಮತಿ ಕೇಳಲು ದೈವ ಅಪ್ಪಣೆ ‌ಕೊಟ್ಟಿದೆ: ದೈವ ನರ್ತಕ ಉಮೇಶ್ ಪಂಬದ – Vishwanews24

Leave a Reply