ಶಿವಮೊಗ್ಗ: ಶಿವಮೊಗ್ಗದಲ್ಲಿ ಶನಿವಾರ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಶಿವಮೊಗ್ಗ ತಾಲೂಕಿನ ಮುದ್ದಿನಕೊಪ್ಪ ಟ್ರೀ ಪಾರ್ಕ್ ನ ಲಯನ್ ಸಫಾರಿ ಬಳಿ ದುರ್ಘಟನೆ ಸಂಭವಿಸಿದೆ.
ಶಿವಮೊಗ್ಗದಿಂದ ಸಾಗರ ಕಡೆ ತೆರಳುತ್ತಿದ್ದ ಇನೋವಾ ಕಾರು ಹಾಗೂ ಸಾಗರದಿಂದ ಶಿವಮೊಗ್ಗದ ಕಡೆ ಬರುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಎರಡು ಕಾರುಗಳು ತೀವ್ರ ಛಿದ್ರಗೊಂಡಿವೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಮೂವರಿಗೆ ಗಂಭೀರ ಗಾಯವಾಗಿದೆ.
ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಕುಂಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ. ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕಾರುಗಳ ಭಾಗಗಳನ್ನು ತೆರವು ಮಾಡಲಾಗಿದೆ. ಅತಿ ವೇಗ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…