Featured

ಎರಡು ದಿನಗಳ ಕಾಂಗ್ರೆಸ್ “ರಾಜ್ಯ ಚಿಂತನ ಶಿಬಿರ”ಕ್ಕೆ ಚಾಲನೆ – ಇದೊಂದು ಐತಿಹಾಸಿಕ ಕಾರ್ಯಕ್ರಮ : ಡಿಕೆಶಿ – Vishwanews24

ಎಲ್ಲಾ ವರ್ಗದ ಜನರ ಸೇವೆಗೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು..

ಉತ್ತಮ ಆಡಳಿತ ನೀಡುವ ಸರ್ಕಾರ ರಚಿಸಬೇಕು..

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ಹೊರವಲಯದ ಕ್ಲಾರ್ಕ್ ಎಕ್ಸಾಟಿಕದಲ್ಲಿ ಇಂದಿನಿಂದ ಆರಂಭವಾದ ಎರಡು ದಿನಗಳ ಕಾಂಗ್ರೆಸ್ “ರಾಜ್ಯ ಚಿಂತನ ಶಿಬಿರ”ದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಚಾಲನೆ ನೀಡಿದರು

ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ನಾನು ಪಕ್ಷದ ಅಧ್ಯಕ್ಷನಾಗಿ ಜವಾಬ್ದಾರಿ ತೆಗೆದುಕೊಂಡಾಗ, ‘ಜತೆಗೂಡುವುದು ಆರಂಭ, ಜತೆಗೂಡಿ ಯೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು’ ಎಂದು ಹೇಳಿದ್ದೆ. ಈ ಚಿಂತನ ಮಂಥನ ಶಿಬಿರವನ್ನು 7-8 ತಿಂಗಳ ಹಿಂದೆಯಾ ನಡೆಸಲು ಯೋಚಿಸಿದ್ದೆವು. ಉಪಚುನಾವಣೆ, ಹೋರಾಟ, ಅಧಿವೇಶನ, ದೆಹಲಿ ಕಾರ್ಯಕ್ರಮ ಮತ್ತಿತರ ಕಾರಣಗಳಿಂದ ನಾಲ್ಕು ಬಾರಿ ಮುಂದೂಡಲಾಗಿತ್ತು. ಕೊಡಗು, ಹುಬ್ಬಳ್ಳಿ, ಮಂಗಳೂರಿನಲ್ಲಿ ಮಾಡಲು ನಿರ್ಧರಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಸಾಧ್ಯವಾಗಿರಲಿಲ್ಲ. ಎಐಸಿಸಿ ಕೊಟ್ಟಿರುವ ಸೂಚನೆ, ಮಾರ್ಗದರ್ಶನದ ಪ್ರಕಾರ ನಾನು ಈ ಸಭೆ ಮಾಡುತ್ತಿದ್ದೇವೆ. ಅವರ ಸೂಚನೆಯಂತೆ ಆರು ಸಮಿತಿಗಳನ್ನು ರಚಿಸಲಾಗಿದೆ ಎಂದರು.

ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಯಾವ ದಿಕ್ಕಿನಲ್ಲಿ ಹೋಗಬೇಕು, ಯಾವ ರೀತಿ ಹೋರಾಟ ಮಾಡಬೇಕು ಎಂದು ಉದಯಪುರ ನವಸಂಕಲ್ಪ ಶಿಬಿರದಲ್ಲಿ ತೀರ್ಮಾನ ಮಾಡಲಾಗಿದೆ.ಕಾರ್ಯಾಧ್ಯಕ್ಷರಿದ್ದರೂ ಸಮಿತಿಗಳಿಗೆ ಬೇರೆ ನಾಯಕರನ್ನು ಅಧ್ಯಕ್ಷರನ್ನಾಗಿ ಮಾಡಿದ್ದು, ಉದಯಪುರ ಸಭೆಯಲ್ಲಿ ಭಾಗವಹಿಸಿದ್ದವರಿಗೆ ಅವಕಾಶ ನೀಡಲಾಗಿದೆ. ಎಲ್ಲಾ ಸಮಿತಿಗಳು ನಿನ್ನೆ, ಮೊನ್ನೆ ಚರ್ಚೆ ಮಾಡಿ ಸಲಹೆಗಳ ಪಟ್ಟಿ ಮಾಡಿದ್ದು, ಇಂದು ಆ ಬಗ್ಗೆ ಚರ್ಚಿಸಲಾಗುವುದು. ಈ ಸಮಿತಿಗಳಲ್ಲಿ ಇಲ್ಲದ, ಸಲಹೆ ನೀಡಲು ಬಯಸುವವರು ಅದನ್ನು ಲಿಖಿತ ರೂಪದಲ್ಲಿ ನೀಡಬಹುದು. ಅಮೂಲ್ಯ ಸಲಹೆಗಳನ್ನು ಸೇರ್ಪಡೆ ಮಾಡಿಕೊಂಡು ಚರ್ಚಿಸಲಾಗುವುದು. ನಿಮ್ಮ ಸಲಹೆ ರಾಜ್ಯ ಹಾಗೂ ದೇಶದ ಭವಿಷ್ಯ, ಪಕ್ಷದ ಬಲವರ್ಧನೆ, 2023 ಹಾಗೂ 2024 ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಇರಲಿ ಎಂದು ಹೇಳಿದರು.

ರಾಜ್ಯದಲ್ಲಿ 78 ಲಕ್ಷ ಸದಸ್ಯರನ್ನು ನೋಂದಣಿ ಮಾಡಲಾಗಿದ್ದು, ಅದರಲ್ಲಿ ಶೇ.42 ರಷ್ಟು ಮಂದಿ 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರು, ಶೇ.42 ರಷ್ಟು ಮಂದಿ ಮಹಿಳೆಯರು. ಸದಸ್ಯತ್ವ ನೋಂದಣಿ ಮುಂದುವರಿಯಲಿದ್ದು, ಬೂತ್ ಮಟ್ಟದ ಸಮಿತಿ ಸೇರಿ ಎಲ್ಲ ಸಮಿತಿಗಳನ್ನು ರಚಿಸಲು ಕಾಲಮಿತಿ ನಿಗದಿ ಮಾಡಲಾಗಿದೆ. ಪ್ರತಿ ಜಿಲ್ಲೆಯಲ್ಲಿ ಆಗಸ್ಟ್ 9 ರಿಂದ ಆಗಸ್ಟ್ 15 ರ ವರೆಗೆ ಜಿಲ್ಲಾ ಮಟ್ಟದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲು ರಾಷ್ಟ್ರ ನಾಯಕರು ಸೂಚಿಸಿದ್ದಾರೆ. ಯುವಕರು, ವಿದ್ಯಾರ್ಥಿಗಳು, ಎಲ್ಲಾ ವರ್ಗದವರನ್ನು ಸೇರಿಸಿಕೊಂಡು ಸರಕಾರದ ವೈಫಲ್ಯಗಳ ವಿರುದ್ಧ ದೊಡ್ಡ ಹೋರಾಟ ಮಾಡಬೇಕಾಗಿದೆ. ನಿಮ್ಮ ಕ್ಷೇತ್ರ, ಜಿಲ್ಲೆ ಹಾಗೂ ರಾಜ್ಯಕ್ಕೆ ಪ್ರತ್ಯೇಕ ಪ್ರಣಾಳಿಕೆ ಮಾಡಬೇಕು. ಕರಾವಳಿ, ಮಲೆನಾಡು, ಬೆಂಗಳೂರು, ಕಲ್ಯಾಣ ಕರ್ನಾಟಕ ಸೇರಿದಂತೆ ಎಲ್ಲಾ ವಲಯಕ್ಕೆ ಪ್ರತ್ಯೇಕ ಕಾರ್ಯಕ್ರಮ ರೂಪಿಸಬೇಕು. ಎಲ್ಲಾ ವರ್ಗದ ಜನರ ಸೇವೆಗೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು. ಉತ್ತಮ ಆಡಳಿತ ನೀಡುವ ಸರ್ಕಾರ ರಚಿಸಬೇಕು ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ರಾಮಲಿಂಗಾರೆಡ್ಡಿ, ಧ್ರುವನಾರಾಯಣ್ ಮತ್ತಿತರ ಮುಖಂಡರು ಭಾಗವಹಿಸಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago