ಎರಡು ರಾಷ್ಟ್ರೀಯ ಪಕ್ಷಗಳನ್ನು ಹೊರ ಹಾಕಲು ಕನ್ನಡಿಗರು ನನಗೆ  ಸುಪಾರಿ ಕೊಟ್ಟಿದ್ದಾರೆ : ಹೆಚ್.ಡಿ.ಕೆ – Vishwanews24

Featured, ರಾಜ್ಯ ನ್ಯೂಸ್

ಎರಡು ರಾಷ್ಟ್ರೀಯ ಪಕ್ಷಗಳನ್ನು ಹೊರ ಹಾಕಲು ಕನ್ನಡಿಗರು ನನಗೆ  ಸುಪಾರಿ ಕೊಟ್ಟಿದ್ದಾರೆ : ಹೆಚ್.ಡಿ.ಕೆ

ಬೆಂಗಳೂರು: “ಎರಡು ರಾಷ್ಟ್ರೀಯ ಪಕ್ಷಗಳನ್ನು ಕರ್ನಾಟಕದಿಂದ ಹೊರ ಹಾಕುವಂತೆ ಕನ್ನಡಿಗರು ನನಗೆ ಸುಪಾರಿ ಕೊಟ್ಟಿದ್ದಾರೆ” ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಬೆಲೆ ಏರಿಕೆ ವಿರುದ್ಧ ಜೆಡಿಎಸ್ ಪಕ್ಷವು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷದ ಬಗ್ಗೆ ಟೀಕಿಸಲು, ಬಿಜೆಪಿ ನಾಯಕರು ನನಗೆ ಸುಪಾರಿ ಕೊಟ್ಟಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ ನನಗೆ ಸುಪಾರಿ ನೀಡಿರುವುದು ಬಿಜೆಪಿಯವರಲ್ಲ, ಕನ್ನಡಿಗರು. ಎರಡು ರಾಷ್ಟ್ರೀಯ ಪಕ್ಷಗಳನ್ನು ಹೊರ ಹಾಕಲು ಕನ್ನಡಿಗರು ಸುಪಾರಿ ಕೊಟ್ಟಿದ್ದಾರೆ. ನೀರಾವರಿ ಯೋಜನೆಗಳ ಬಗ್ಗೆ ಮಾತನಾಡೋದಕ್ಕೆ ಸುಪಾರಿ ಕೊಟ್ಟಿದ್ದಾರೆ” ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು.


“ಭಾರತೀಯ ಜನತಾ ಪಾರ್ಟಿಯೂ ಅಧಿಕಾರಕ್ಕೆ ಬರಲು, ಬಿಜೆಪಿ ನಾಯಕರು ಎಷ್ಟು ಕಾರಣವೋ, ಕಾಂಗ್ರೆಸ್ ನಾಯಕರು ಅಷ್ಟೇ ಕಾರಣ. ಅಪಮಾರ್ಗದ ಮೂಲಕ ನನ್ನ ನೇತೃತ್ವದ ಮೈತ್ರಿ ಸರ್ಕಾರವನ್ನು ಉರುಳಿಸಿ ಅದೇ ರೀತಿಯ ಅಪಮಾರ್ಗದ ಮೂಲಕ ಬಿಜೆಪಿ ಸರ್ಕಾರ ಅದಿಕಾರಕ್ಕೆ ಬಂತು. ಆದರೆ ಇಂದು ಬಿಜೆಪಿ ಸರ್ಕಾರವನ್ನು ಕೈ ನಾಯಕರು ಅನೈತಿಕ ಸರ್ಕಾರ ಎಂದು ಹೇಳುತ್ತಿದ್ದಾರೆ. ಇದನ್ನು ರಾಜ್ಯದ ಜನರು ಗಮನಿಸಬೇಕು” ಎಂದು ರಾಜ್ಯ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.

ಮಹಿಳಾ ಸ್ವಸಹಾಯ ಸಂಘಗಳ ನೆರವಿಗೆ ಆಯಂಕರ್ ಬ್ಯಾಂಕ್ ಸ್ಥಾಪನೆ : ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ – Vishwanews24

Leave a Reply