Featured

ಎರಡು ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯುವ ಶಕ್ತಿ ಜೆಡಿಎಸ್‍ಗೆ ಇದೆ, ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಛಲ ತೊಟ್ಟಿದ್ದೇವೆ : ರೇವಣ್ಣ -Vishwanews24

ಹಾಸನ: ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಛಲ ತೊಟ್ಟಿದ್ದೇವೆ. ಈ ರಾಜ್ಯದಲ್ಲಿ ರೈತರು ಉಳಿಯಬೇಕು. ಅದಕ್ಕಾಗಿ ಮತ್ತೊಮ್ಮೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲೇಬೇಕು,  ಕುಮಾರಸ್ವಾಮಿ ಗೌರವದಿಂದ ಇರಬೇಕು. ರಾಜಕೀಯ ಶಾಶ್ವತವಲ್ಲದ ಕಾರಣ ಕೆಲವೊಂದನ್ನು ಬಿಡಬೇಕು. ಅಣ್ಣನಾಗಿ ಈ ಸಲಹೆ ನೀಡುತ್ತಿದ್ದೇನೆ ಎಂದು ರೇವಣ್ಣ ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕುಮಾರಸ್ವಾಮಿ ಕೆಲವು ತಪ್ಪು ಮಾಡಿದ್ದಾರೆ. ಯಾವುದಕ್ಕೂ ಬಾರದವರನ್ನು ಶಾಸಕ, ಮಂತ್ರಿ, ಸಂಸರನ್ನಾಗಿ ಮಾಡಿದ್ದಾರೆ. ಮಾಡಿದ ತಪ್ಪಿಗೆ ಈಗ ಕುಮಾರಸ್ವಾಮಿ ಅನುಭವಿಸುತ್ತಿದ್ದಾರೆ. ಇವೆಲ್ಲ ಎಲ್ಲಿದ್ದವು? ಇವೆಲ್ಲವನ್ನು ನಾನು ಹತ್ತಿರಕ್ಕೆ ಸೇರಿಸಲ್ಲ. ಕುಮಾರಸ್ವಾಮಿಯದ್ದು ಸ್ವಲ್ಪ ದೊಡ್ಡ ಗುಣ, ಆಯ್ಯೋ ಅಂತಾ ಬಂದರೆ ತಥಾಸ್ತು ಅಂದು ಬಿಡುತ್ತಾನೆ. ಆಮೇಲೆ ಅವರೆಲ್ಲರೂ ಕುಮಾರಸ್ವಾಮಿಗೆ ಟೋಪಿ ಹಾಕಿ ಹೋಗುತ್ತಾರೆ ಎಂದು ಜೆಡಿಎಸ್ ಬಿಟ್ಟವರ ವಿರುದ್ಧ ಕಿಡಿಕಾರಿದರು.

ರಾಷ್ಟ್ರೀಯ ಪಕ್ಷಗಳು ಏನೇ ಮಾಡಿದರು ಇದರಲ್ಲಿ ಯಶಸ್ವಿಯಾಗುವುದಿಲ್ಲ. ಇಂತಹ ಅಪಪ್ರಚಾರವನ್ನು ದೇವೇಗೌಡರು, ಕುಮಾರಸ್ವಾಮಿ ತುಂಬಾ ದಿನಗಳಿಂದ ನೋಡಿದ್ದಾರೆ. ಜೆಡಿಎಸ್‍ನ ಮುಗಿಸಲು ಯಾರಿಂದಲೂ ಆಗಲ್ಲ. ಜನತೆ, ದೇವರ ಆಶೀರ್ವಾದ ಇರೋವವರೆಗೂ ಜೆಡಿಎಸ್ ಮುಗಿಸಲು ಸಾಧ್ಯವಿಲ್ಲ. ದೇವೇಗೌಡರು ಇವೆಲ್ಲವನ್ನೂ ಎದುರಿಸಿಯೇ ಮುಖ್ಯಮಂತ್ರಿ, ಪ್ರಧಾನಮಂತ್ರಿ ಆಗಿದ್ದಾರೆ. ಕಾಲವೇ ಎಲ್ಲವನ್ನೂ ನಿರ್ಧರಿಸುತ್ತದೆ. ಎರಡು ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯುವ ಶಕ್ತಿ ಜೆಡಿಎಸ್‍ಗೆ ಇದೆ. ಜನರೇ ಎರಡು ರಾಷ್ಟ್ರೀಯ ಪಕ್ಷಗಳಿಗೆ ಉಗಿಯುವ ಕಾಲ ಬರಲಿದೆ. ಜೆಡಿಎಸ್ ಕಾರ್ಯಕರ್ತರು ಧೃತಿಗೆಡಬೇಕಿಲ್ಲ. ಜೆಡಿಎಸ್ ಮುಗಿಸಲು ಕಚೇರಿಯನ್ನು ಕಿತ್ತುಕೊಂಡರು. ಈಗ ಒಳ್ಳೆಯ ಕಚೇರಿ ಕಟ್ಟಿಲ್ಲವೇ, ಅಪ್ರಚಾರಗಳಿಗೆ ಕಿವಿಗೊಡಬಾರದು ಎಂದು ಸಲಹೆ ನೀಡಿದರು

ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಛಲ ತೊಟ್ಟಿದ್ದೇವೆ. ಈ ರಾಜ್ಯದಲ್ಲಿ ರೈತರು ಉಳಿಯಬೇಕು. ಅದಕ್ಕಾಗಿ ಮತ್ತೊಮ್ಮೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲೇಬೇಕು. ಕುಮಾರಸ್ವಾಮಿ ಸಾಲಮನ್ನಾ ಮಾಡಿರುವ ಹಣವನ್ನೇ ತಡೆಹಿಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಮೈತ್ರಿ ಬಗ್ಗೆ ದೇವೇಗೌಡರು ತೀರ್ಮಾನ ಮಾಡುತ್ತಾರೆ. ಕೋಮುವಾದಿ ಪಕ್ಷ ದೂರವಿಡಲು ಒಂದಾಗುವುದಾದರೆ ದೇವೇಗೌಡರು, ಕುಮಾರಸ್ವಾಮಿ ನಿರ್ಧರಿಸುತ್ತಾರೆ. ಎಂದರು.

Vishwa News 24

Recent Posts

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

12 minutes ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

3 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

3 hours ago

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

3 hours ago

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…

4 hours ago

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

4 hours ago