ಹಾಸನ: ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಛಲ ತೊಟ್ಟಿದ್ದೇವೆ. ಈ ರಾಜ್ಯದಲ್ಲಿ ರೈತರು ಉಳಿಯಬೇಕು. ಅದಕ್ಕಾಗಿ ಮತ್ತೊಮ್ಮೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲೇಬೇಕು, ಕುಮಾರಸ್ವಾಮಿ ಗೌರವದಿಂದ ಇರಬೇಕು. ರಾಜಕೀಯ ಶಾಶ್ವತವಲ್ಲದ ಕಾರಣ ಕೆಲವೊಂದನ್ನು ಬಿಡಬೇಕು. ಅಣ್ಣನಾಗಿ ಈ ಸಲಹೆ ನೀಡುತ್ತಿದ್ದೇನೆ ಎಂದು ರೇವಣ್ಣ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕುಮಾರಸ್ವಾಮಿ ಕೆಲವು ತಪ್ಪು ಮಾಡಿದ್ದಾರೆ. ಯಾವುದಕ್ಕೂ ಬಾರದವರನ್ನು ಶಾಸಕ, ಮಂತ್ರಿ, ಸಂಸರನ್ನಾಗಿ ಮಾಡಿದ್ದಾರೆ. ಮಾಡಿದ ತಪ್ಪಿಗೆ ಈಗ ಕುಮಾರಸ್ವಾಮಿ ಅನುಭವಿಸುತ್ತಿದ್ದಾರೆ. ಇವೆಲ್ಲ ಎಲ್ಲಿದ್ದವು? ಇವೆಲ್ಲವನ್ನು ನಾನು ಹತ್ತಿರಕ್ಕೆ ಸೇರಿಸಲ್ಲ. ಕುಮಾರಸ್ವಾಮಿಯದ್ದು ಸ್ವಲ್ಪ ದೊಡ್ಡ ಗುಣ, ಆಯ್ಯೋ ಅಂತಾ ಬಂದರೆ ತಥಾಸ್ತು ಅಂದು ಬಿಡುತ್ತಾನೆ. ಆಮೇಲೆ ಅವರೆಲ್ಲರೂ ಕುಮಾರಸ್ವಾಮಿಗೆ ಟೋಪಿ ಹಾಕಿ ಹೋಗುತ್ತಾರೆ ಎಂದು ಜೆಡಿಎಸ್ ಬಿಟ್ಟವರ ವಿರುದ್ಧ ಕಿಡಿಕಾರಿದರು.
ರಾಷ್ಟ್ರೀಯ ಪಕ್ಷಗಳು ಏನೇ ಮಾಡಿದರು ಇದರಲ್ಲಿ ಯಶಸ್ವಿಯಾಗುವುದಿಲ್ಲ. ಇಂತಹ ಅಪಪ್ರಚಾರವನ್ನು ದೇವೇಗೌಡರು, ಕುಮಾರಸ್ವಾಮಿ ತುಂಬಾ ದಿನಗಳಿಂದ ನೋಡಿದ್ದಾರೆ. ಜೆಡಿಎಸ್‍ನ ಮುಗಿಸಲು ಯಾರಿಂದಲೂ ಆಗಲ್ಲ. ಜನತೆ, ದೇವರ ಆಶೀರ್ವಾದ ಇರೋವವರೆಗೂ ಜೆಡಿಎಸ್ ಮುಗಿಸಲು ಸಾಧ್ಯವಿಲ್ಲ. ದೇವೇಗೌಡರು ಇವೆಲ್ಲವನ್ನೂ ಎದುರಿಸಿಯೇ ಮುಖ್ಯಮಂತ್ರಿ, ಪ್ರಧಾನಮಂತ್ರಿ ಆಗಿದ್ದಾರೆ. ಕಾಲವೇ ಎಲ್ಲವನ್ನೂ ನಿರ್ಧರಿಸುತ್ತದೆ. ಎರಡು ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯುವ ಶಕ್ತಿ ಜೆಡಿಎಸ್‍ಗೆ ಇದೆ. ಜನರೇ ಎರಡು ರಾಷ್ಟ್ರೀಯ ಪಕ್ಷಗಳಿಗೆ ಉಗಿಯುವ ಕಾಲ ಬರಲಿದೆ. ಜೆಡಿಎಸ್ ಕಾರ್ಯಕರ್ತರು ಧೃತಿಗೆಡಬೇಕಿಲ್ಲ. ಜೆಡಿಎಸ್ ಮುಗಿಸಲು ಕಚೇರಿಯನ್ನು ಕಿತ್ತುಕೊಂಡರು. ಈಗ ಒಳ್ಳೆಯ ಕಚೇರಿ ಕಟ್ಟಿಲ್ಲವೇ, ಅಪ್ರಚಾರಗಳಿಗೆ ಕಿವಿಗೊಡಬಾರದು ಎಂದು ಸಲಹೆ ನೀಡಿದರು
ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಛಲ ತೊಟ್ಟಿದ್ದೇವೆ. ಈ ರಾಜ್ಯದಲ್ಲಿ ರೈತರು ಉಳಿಯಬೇಕು. ಅದಕ್ಕಾಗಿ ಮತ್ತೊಮ್ಮೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲೇಬೇಕು. ಕುಮಾರಸ್ವಾಮಿ ಸಾಲಮನ್ನಾ ಮಾಡಿರುವ ಹಣವನ್ನೇ ತಡೆಹಿಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಮೈತ್ರಿ ಬಗ್ಗೆ ದೇವೇಗೌಡರು ತೀರ್ಮಾನ ಮಾಡುತ್ತಾರೆ. ಕೋಮುವಾದಿ ಪಕ್ಷ ದೂರವಿಡಲು ಒಂದಾಗುವುದಾದರೆ ದೇವೇಗೌಡರು, ಕುಮಾರಸ್ವಾಮಿ ನಿರ್ಧರಿಸುತ್ತಾರೆ. ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…