ಪಡುಬಿದ್ರಿ : ರಾಂಗ್ ಸೈಡ್‌ನಿಂದ ಬಂದ ಸ್ಕೂಟಿಯೊಂದು ಗೂಡ್ಸ್ ವಾಹನಕ್ಕೆ ಢಿಕ್ಕಿ ಹೊಡೆದು, ಸವಾರ ಮೃತಪಟ್ಟ ಘಟನೆ ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಎರ್ಮಾಳು ನಾರಾಳ್ತಾಯ ಗುಡಿ ಬಳಿ ಭಾನುವಾರ ಸಂಜೆ ಸಂಭವಿಸಿದೆ.
ಮೃತರನ್ನು ಅದಮಾರು ಸಮೀಪದ ವಕೀಲರ ತೋಟದ ನಿವಾಸಿ ಗುರುರಾಜ ರಾವ್ (೬೩) ಎಂದು ಗುರುತಿಸಲಾಗಿದೆ. ಮೃತರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.
ಮಂಗಳೂರು ಮೂಲದ ಗೂಡ್ಸ್ ವಾಹನ ಚಾಲಕ ವಿಜಯ್ ಕಾಮತ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯ್ ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಮೆದುಳಿನ ಭಾಗವು ಹೊರಬಂದಿತ್ತು. ಅಲ್ಲದೆ, ಅವರ ಒಂದು ಕೈ ಸಂಪೂರ್ಣವಾಗಿ ಜಜ್ಜಲ್ಪಟ್ಟಿದ್ದು, ಎರಡು ಮೂರು ತುಂಡುಗಳಾಗಿ ಬೇರ್ಪಟ್ಟಿರುವುದು ನಂತರ ಗಮನಕ್ಕೆ ಬಂದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಢಿಕ್ಕಿಯ ರಭಸಕ್ಕೆ ಗೂಡ್ಸ್ ವಾಹನವು ರಸ್ತೆಯ ಬದಿಯಲ್ಲಿ ಪಲ್ಟಿಯಾಗಿ ಬಿದ್ದಿತ್ತು. ಸ್ಥಳೀಯರು ವಾಹನವನ್ನು ಎತ್ತಿದ ನಂತರವಷ್ಟೇ ಚಾಲಕ ಪ್ರಜ್ಞಾಹೀನ ಸ್ಥಿತಿಯಲ್ಲಿ ಒಳಗೆ ಸಿಲುಕಿರುವುದು ಕಂಡುಬಂದಿದೆ. ಇತ್ತ ಸ್ಕೂಟರ್ ಸವಾರ ಗುರುರಾಜ ರಾವ್ ಅವರ ಮೃತದೇಹವು ಅಪಘಾತದ ವೇಳೆ ಸ್ವಲ್ಪ ದೂರಕ್ಕೆ ಎಸೆಯಲ್ಪಟ್ಟಿತ್ತು.
ಪಡುಬಿದ್ರಿ ಪೊಲೀಸ್ ಉಪನಿರೀಕ್ಷಕ ಅನಿಲ್ ಕುಮಾರ್ (ಅಪರಾಧ ವಿಭಾಗ) ಮತ್ತು ಅವರ ತಂಡ ಸ್ಥಳಕ್ಕೆ ಧಾವಿಸಿ, ಸಾರ್ವಜನಿಕರ ಸಹಾಯದೊಂದಿಗೆ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿದರು.
ಮೃತರ ದೇಹವನ್ನು ಉಡುಪಿಯ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…