ಎರ್ಮಾಳು : ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯ ಬದಿಯ ಮೋರಿಯ ದಂಡೆಗೆ ಡಿಕ್ಕಿ ಹೊಡೆದು ಮುಗುಚಿ ಬಿದ್ದ ಘಟನೆ ಕಾಪು ತಾಲೂಕಿನ ಬಡಾ ಎರ್ಮಾಳುವಿನ ಅಪೂರ್ವ ಲಾಡ್ಜ್ ಮುಂಭಾಗದಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಕಾರು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ.
ಚಾಲಕ ನಿದ್ದೆಯ ಮಂಪರಿನಲ್ಲಿದ್ದ ಪರಿಣಾಮ ನಿಯಂತ್ರಣ ಕಳೆದುಕೊಂಡ ಕಾರು ಏಕಾಏಕಿಯಾಗಿ ರಸ್ತೆಯ ಬದಿಯ ಮೋರಿಯ ದಂಡೆಗೆ ಬಡಿದಿದೆ. ಚಾಲಕ ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರನ್ನು ಬಿಟ್ಟು, ಮರಳಿ ಉಡುಪಿಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ದಂಡೆಗೆ ಬಡಿದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಬಂದ ಹೆಜಮಾಡಿ ಟೋಲ್ ಸಿಬ್ಬಂದಿ ಹಾಗೂ ಪೊಲೀಸರು ಹೆದ್ದಾರಿಗೆ ಅಡ್ಡವಾಗಿ ಉರುಳಿಬಿದ್ದ ಕಾರನ್ನು ಯಂತ್ರದ ಮೂಲಕ ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…