ನವದೆಹಲಿ: ದೇಶದಲ್ಲಿ ಎಲ್‌ಪಿಜಿ (LPG) ಸಿಲಿಂಡರ್‌ಗಳ ಕೃತಕ ಅಭಾವ ಮತ್ತು ಕಾಳಸಂತೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಈಗ ಕಠಿಣ ಕ್ರಮಗಳಿಗೆ ಮುಂದಾಗಿದೆ. ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಗ್ಯಾಸ್ ಸಿಲಿಂಡರ್‌ಗಳ ದಾಸ್ತಾನು ಮಾಡುವುದನ್ನು ತಡೆಯಲು, ಎರಡು ಬುಕ್ಕಿಂಗ್‌ಗಳ ನಡುವಿನ ಅವಧಿಯನ್ನು 21 ದಿನಗಳಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ.
ಈ ಹಿಂದೆ 55 ದಿನಗಳಿಗೊಮ್ಮೆ ಸಿಲಿಂಡರ್ ಬುಕ್ ಮಾಡುತ್ತಿದ್ದವರು, ಈಗ ಯುದ್ಧದ ಭೀತಿಯಿಂದ ಕೇವಲ 15 ದಿನಗಳಲ್ಲೇ ಬುಕ್ಕಿಂಗ್ ಮಾಡುತ್ತಿರುವುದು ಕಂಡುಬಂದಿದೆ. ಇದನ್ನು ನಿಯಂತ್ರಿಸಲು ಹೊಸ ನಿಯಮ ಜಾರಿಗೆ ತರಲಾಗಿದೆ. ವಾಣಿಜ್ಯ ಬಳಕೆಯ (Commercial) ಸಿಲಿಂಡರ್‌ಗಳಿಗಿಂತ ಮನೆ ಬಳಕೆಯ (Domestic) ಗ್ರಾಹಕರಿಗೆ ಮೊದಲ ಆದ್ಯತೆ ನೀಡುವಂತೆ ಸರ್ಕಾರ ಸೂಚನೆ ನೀಡಿದೆ. “ಮನೆ ಬಳಕೆಯ ಗ್ರಾಹಕರ ಹಿತವೇ ನಮಗೆ ಮುಖ್ಯ” ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಇದನ್ನೂ ಓದಿ:👇
ದೇಶೀಯ ರಿಫೈನರಿಗಳಿಗೆ ಎಲ್‌ಪಿಜಿ ಉತ್ಪಾದನೆಯನ್ನು ಗರಿಷ್ಠ ಮಟ್ಟಕ್ಕೆ ಹೆಚ್ಚಿಸುವಂತೆ ಸರ್ಕಾರ ಆದೇಶಿಸಿದೆ. ಗ್ಯಾಸ್ ಪೂರೈಕೆಯಲ್ಲಿ ಸ್ವಾವಲಂಬನೆ ಸಾಧಿಸಲು ಹೊಸ ದೇಶಗಳೊಂದಿಗೆ ಸರ್ಕಾರ ಮಾತುಕತೆ ನಡೆಸುತ್ತಿದೆ. ಅಲ್ಜೀರಿಯಾ, ಆಸ್ಟ್ರೇಲಿಯಾ, ಕೆನಡಾ ಮತ್ತು ನಾರ್ವೆ ದೇಶಗಳು ಭಾರತಕ್ಕೆ ಎಲ್‌ಪಿಜಿ ಮಾರಾಟ ಮಾಡಲು ಮುಂದೆ ಬಂದಿವೆ ಎಂದು ಮೂಲಗಳು ತಿಳಿಸಿವೆ.
ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…