ಬೆಂಗಳೂರು: ಎಲ್ಲದಕ್ಕೂ ಕಾಂಗ್ರೆಸ್ ಕಾರಣ ಎನ್ನುವ ಈ ಬಿಜೆಪಿಯವರಿಗೆ ಕಾಮಲೇ ರೋಗ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ಹೊರಹಾಕಿದ್ದಾರೆ.
ವೀರ ಸಾವರ್ಕರ್ ಭಾವಚಿತ್ರ ಇಡುವ ವಿಚಾರದಲ್ಲಿ ಶಿವಮೊಗ್ಗದಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಕಾಮಾಲೆ ರೋಗ ಬಂದಿದೆ. ಸುಳ್ಳು ಹೇಳುವುದು, ಸುಳ್ಳು ಹಬ್ಬಿಸುವುದು, ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಹಾಕಿದ್ದಾರೆ. ಹಾಕಲಿ ಬೇಡ ಅನ್ನಲ್ಲ. ಆದರೆ ಟಿಪ್ಪು ಫೋಟೋ ತೆಗೆದಿದ್ದಾರೆ. ಹೀಗೆ ಮಾಡಿದರೆ ಗಲಭೆ ಆಗಲ್ವಾ? ಈಶ್ವರಪ್ಪ ಕಾಂಗ್ರೆಸ್ ಬಗ್ಗೆ ಆರೋಪ ಮಾಡುತ್ತಾನೆ ಇರುತ್ತಾರೆ. ತಪ್ಪು ಅವರು ಮಾಡಿ ಕಾಂಗ್ರೆಸ್ ಮೇಲೆ ಹಾಕುತ್ತಾರೆ. ಮಗೂನು ಚಿವುಟುತ್ತಾರೆ ತೊಟ್ಟಿಲು ಕೂಡ ತೂಗುತ್ತಾರೆ ಎಂದು ಕಿಡಿಕಾರಿದ್ದಾರೆ.
ಘಟನೆಯಲ್ಲಿ ಎಸ್‍ಡಿಪಿಐ ಅವರಿದ್ದರೆ ಕ್ರಮ ತೆಗೆದುಕೊಳ್ಳಿ. ಸರ್ಕಾರ ನಿಮ್ಮದೆ ಇದೆ. ಎಸ್‍ಡಿಪಿಐ ಪಿಎಫ್‍ಐ ಸಮರಸ್ಯ ಹಾಳು ಮಾಡುತ್ತಿದ್ದಾರೆ ಎಂಬ ಬಗ್ಗೆ ನಿಮ್ಮ ಬಳಿ ದಾಖಲೆ ಇದ್ದರೆ, ಕ್ರಮ ತೆಗೆದುಕೊಳ್ಳಿ. ಇಬ್ಬಂದಿ ರಾಜಕೀಯ ಮಾಡಬೇಡಿ. ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ಹೊರಹಾಕಿದ್ದಾರೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ 4ನೇ ವರ್ಷದ ಪುಣ್ಯತಿಥಿ: ಪ್ರಧಾನಿ ಸೇರಿ ಗಣ್ಯರಿಂದ ಗೌರವ ನಮನ – Vishwanews24
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…