ನಮ್ಮ ಸರ್ಕಾರ ಐದು ವರ್ಷ ಪೂರೈಸುತ್ತದೆ. ನಿಗಮ ಮಂಡಳಿಗಳ ಆಕಾಂಕ್ಷಿಗಳು, ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಎಲ್ಲರೂ ಒಗ್ಗಟ್ಟಾಗಿದ್ದೇವೆ. ಭಿನ್ನಾಭಿಪ್ರಾಯ ಇದೆ ಎಂಬುವುದು ಮಾಧ್ಯಮಗಳ ಸೃಷ್ಟಿ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು. ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗಡಿಸಿಕೊಂಡು ಕಾಂಗ್ರೆಸ್‍ನ್ನು ಟಾರ್ಗೆಟ್ ಮಾಡುತ್ತಿದೆ. ಕಾಂಗ್ರೆಸ್ ಪಕ್ಷದ ಮುಖಂಡರ ಮನೆ ಮೇಲೆ ಐಟಿ ದಾಳಿ ಮಾಡುವುದು, ಡಿ.ಕೆ.ಶಿವಕುಮಾರ್ ಅವರನ್ನು ಗುರಿಯಾಗಿಸಿಕೊಂಡಿರುವುದು ಖಂಡನೀಯ ಎಂದರು.
ನಾವೆಲ್ಲರೂ ಡಿಕೆಶಿ ಪರವಾಗಿದ್ದೇವೆ. ಅವರು ಯಾವುದೇ ತಪ್ಪು ಮಾಡಿಲ್ಲ ಕಳೆದ ಒಂದು ವರ್ಷದಿಂದ ಕಾಂಗ್ರೆಸ್ ಪಕ್ಷದವರನ್ನು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರಿಯಾಗಿಸಿಕೊಂಡು ದಾಳಿ ಮಾಡಲಾಗುತ್ತಿದೆ. ಬಿಜೆಪಿಯವರು ನಮ್ಮನ್ನು ಏನು ಮಾಡಲು ಸಾಧ್ಯವಿಲ್ಲ ಎಂದರು. ರೈತರ ಸಾಲಮನ್ನಾ ವಿಚಾರದ ಬಗ್ಗೆ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…